ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಅರ್ಧಗಂಟೆ ಅಬ್ಬರಿಸಿದ ಮಳೆ

Last Updated 28 ಸೆಪ್ಟೆಂಬರ್ 2022, 12:56 IST
ಅಕ್ಷರ ಗಾತ್ರ

ಬೀದರ್: ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಅರ್ಧ ಗಂಟೆ ಮಳೆ ಸುರಿಯಿತು. ಭಾಲ್ಕಿಯಲ್ಲಿ ಎರಡು ತಾಸು ಬಿದ್ದಿದೆ. ಭಾಲ್ಕಿ ತಾಲ್ಲೂಕಿನ ಕಣಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 65 ಮಿ.ಮೀ ಮಳೆಯಾಗಿದೆ.

ಬೀದರ್‌, ಹುಮನಾಬಾದ್, ಹುಲಸೂರ, ಔರಾದ್‌ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಧಾರಾಕರವಾಗಿ ಮಳೆ ಸುರಿದಿದೆ. ಔರಾದ್‌ನ ಕೆಲ ಗ್ರಾಮಗಳಲ್ಲಿ ಸಾಧಾರಣ ಮಳೆ ಸುರಿದಿದೆ.

ಬೀದರ್‌ ನಗರದಲ್ಲಿ ಸಂಜೆ ದಿಢೀರ್‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಧಾರಾಕಾರವಾಗಿ ಸುರಿಯಿತು. ಸೆಕೆಯಿಂದ ಬೇಸತ್ತಿದ್ದ ಜನತೆಗೆ ತಂಪೆರೆಚಿತು. ಶಾಲೆ ಬಿಡುವ ಸಂದರ್ಭದಲ್ಲಿ ಮಳೆ ಆರಂಭವಾದ ಕಾರಣ ವಿದ್ಯಾರ್ಥಿಗಳು ಮನೆಗಳಿಗೆ ತೆರಳಲು ತೊಂದರೆ ಅನುಭವಿಸಿದರು.

ರೋಟರಿ ಸರ್ಕಲ್‌ ಸಮೀಪದ ಸಾಯಿ ಆದರ್ಶ ಶಾಲೆಯ ಆವರಣದಲ್ಲಿ ಸಂಗ್ರಹವಾಗಿದ್ದ ನೀರಿನಲ್ಲೇ ವಿದ್ಯಾರ್ಥಿಗಳು ನಡೆದುಕೊಂಡು ಮನೆಗಳಿಗೆ ತೆರಳಿದರು. ಓಲ್ಡ್‌ಸಿಟಿಯಲ್ಲಿ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿತ್ತು. ನೀರು ಹರಿದು ಹೋಗಲು ಒಂದು ಗಂಟೆ ಸಮಯ ಬೇಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT