ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಟಿಐ: ಹೊಸ ಕೋರ್ಸಗಳ ಪ್ರವೇಶಕ್ಕೆ ಅರ್ಜಿ

Last Updated 26 ಸೆಪ್ಟೆಂಬರ್ 2021, 15:47 IST
ಅಕ್ಷರ ಗಾತ್ರ

ಬೀದರ್: ಬೀದರ್ ಹಾಗೂ ಔರಾದ್‍ನ ಸರ್ಕಾರಿ ಐಟಿಐಗಳಲ್ಲಿ ಎಸ್.ಸಿ.ವಿ.ಟಿ. ಅಡಿಯಲ್ಲಿ ಒಂದು ವರ್ಷದ ಅವಧಿಯ ಇಂಡಸ್ಟ್ರಿಯಲ್ ರೋಬೊಟಿಕ್ ಆ್ಯಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್, ಎರಡು ವರ್ಷದ ಅವಧಿಯ ಬ್ಯಾಟರಿ ಎಲೆಕ್ಟ್ರಿಕಲ್ ವೆಹಿಕಲ್ ಕೋರ್ಸ್‌ಗಳಿಗೆ 10ನೇ ತರಗತಿ ಪಾಸಾದ 14 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿದೆ. 44 ಅಭ್ಯರ್ಥಿಗಳಿಗೆ ಪ್ರವೇಶ ಅವಕಾಶ ಇದೆ. ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಐಟಿಐ ನೋಡಲ್ ಅಧಿಕಾರಿ ಶಿವಶಂಕರ ಟೋಕರೆ ತಿಳಿಸಿದ್ದಾರೆ. ಮಾಹಿತಿಗೆ ಮೊಬೈಲ್ ಸಂಖ್ಯೆ 9844919533 (ಔರಾದ್), 9902797107 (ಬೀದರ್) ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT