ಶುಕ್ರವಾರ, ಮಾರ್ಚ್ 5, 2021
30 °C

ಲಿಂಗಾಯತ ಮಹಾಸಭಾ ಉದ್ಘಾಟನೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಜ.17ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿಯ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ನಡೆಯಲಿದೆ.

ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಿ.ಬಿ. ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಮುಂಡರಗಿಯ ನಿಜಗುಣಪ್ರಭು ತೊಂಟದಾರ್ಯ ಸ್ವಾಮೀಜಿ ಗ್ರಂಥ ಬಿಡುಗಡೆ ಮಾಡುವರು. ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಎಂ. ಜಾಮದಾರ್ ಬೆಂಗಳೂರಿನಿಂದ ಆನ್‍ಲೈನ್ ಮೂಲಕ ಆಶಯ ನುಡಿ ಆಡುವರು.

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ, ಹುಲಸೂರಿನ ಶಿವಾನಂದ ಸ್ವಾಮೀಜಿ, ಬಸವಕಲ್ಯಾಣದ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ, ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಕೌಠಾ(ಬಿ)ದ ಸಿದ್ಧರಾಮ ಶರಣರು ಬೆಲ್ದಾಳ, ಬೀದರ್‌ನ ಅಕ್ಕ ಅನ್ನಪೂರ್ಣತಾಯಿ, ಡಾ.ಗಂಗಾಂಬಿಕೆ ಅಕ್ಕ, ಬೇಲೂರಿನ ಶಿವಕುಮಾರ ಸ್ವಾಮೀಜಿ, ಪಂಚಾಕ್ಷರಿ ಸ್ವಾಮೀಜಿ, ಬಸವ ಕೇಂದ್ರದ ಪಂಚಯ್ಯ ಸ್ವಾಮೀಜಿ ನೇತೃತ್ವ ವಹಿಸುವರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಅಧ್ಯಕ್ಷತೆ ವಹಿಸುವರು. ಸಮಾಜದ ಗಣ್ಯರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು.

ಸನ್ಮಾನ: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಕೆಎಸ್‍ಐಐಡಿಸಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಾಬುವಾಲಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಎನ್‍ಎಸ್‍ಎಸ್‍ಕೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಬಾಬುರಾವ್ ದಾನಿ ಅವರನ್ನು ಸನ್ಮಾನಿಸಲಾಗುವುದು.

ಉದ್ದೇಶ: ಜಿಲ್ಲಾ ಘಟಕದ ಉದ್ಘಾಟನೆಯೊಂದಿಗೆ ಜಿಲ್ಲೆಯಲ್ಲಿ ಭಾನುವಾರ ಮಹಾಸಭಾ ಚಟುವಟಿಕೆಗಳಿಗೆ ಚಾಲನೆ ದೊರೆಯಲಿದೆ. 900 ವರ್ಷಗಳ ಹಿಂದೆ ಬಸವಣ್ಣನವರಿಂದ ಸ್ಥಾಪಿತವಾದ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಹಾಗೂ ಅಲ್ಪಸಂಖ್ಯಾತರ ಮಾನ್ಯತೆ ಕೊಡಿಸಲು ಹೋರಾಟ ನಡೆಸುವುದೇ ಮಹಾಸಭಾದ ಗುರಿಯಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಹಾಗೂ ಮಹಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ ತಿಳಿಸಿದ್ದಾರೆ.

ಜಿಲ್ಲೆಯ ಬಸವ ಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.