ಮಂಗಳವಾರ, ಮಾರ್ಚ್ 21, 2023
20 °C

ಜಲಜೀವನ ಮಿಷನ್ ಯಶಸ್ವಿಗೆ ಶ್ರಮಿಸಿ: ಡಾ.ಚಂದ್ರಶೇಖರ ಪಾಟೀಲ

ಪ್ರಾಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಮನಾಬಾದ್: ‘ಗ್ರಾಮೀಣ ಪ್ರದೇಶದ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸರ್ಕಾರ ‘ಜಲಜೀವನ ಮಿಷನ್’ ಯೋಜನೆ ಜಾರಿಗೆ ತಂದಿದೆ. ಗ್ರಾಮಸ್ಥರ ಸಹಕಾರದೊಂದಿಗೆ ಯೋಜನೆ ಯಶಸ್ವಿಗೆ ಪಿಡಿಒಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಕರೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಹುಮನಾಬಾದ್‌ ಹಾಗೂ ಚಿಟಗುಪ್ಪ ತಾಲ್ಲೂಕಿನ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ, ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ದಿನದ 24 ಗಂಟೆ ನೀರು ಸರಬರಾಜು ಮಾಡುವ ಉದ್ದೇಶ ಈ ಯೋಜನೆ ಹೊಂದಿದೆ. ಪಿಡಿಒಗಳು ಸರ್ಕಾರದಿಂದ ಬಿಡುಗಡೆಗೊಂಡ ಅನುದಾನ ಉತ್ತಮ ರೀತಿಯಿಂದ ಬಳಸಬೇಕು’ ಎಂದರು.

‘ಕ್ಷೇತ್ರದಲ್ಲಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಶಾಸಕ ರಾಜಶೇಖರ ಪಾಟೀಲ ಅವರು ಪ್ರಥಮ ಆದ್ಯತೆ ನೀಡಿದ್ದು, ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಸರ್ಕಾರದ ನಾನಾ ಯೋಜನೆ ಮೂಲಕ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾ.ಪಂ ಇಒ ಡಾ.ಗೋವಿಂದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ದತ್ತಾತ್ರೇಯ ಮೇದಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.