ಔರಾದ್: ಪಟ್ಟಣದಲ್ಲಿ ಮಂಗಳವಾರ ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ.
ಪಟ್ಟಣದ ಅಮರೇಶ್ವರ ಕಾಲೇಜಿನ ಹಿಂಭಾಗದ ಆವರಣದಲ್ಲಿ ದೊಡ್ಡ ಪೆಂಡಾಲ್ ಸಿದ್ದಗೊಂಡಿದೆ. ಸುಮಾರು 40 ಸಾವಿರ ಜನ ಕೂಡಲು ವ್ಯವಸ್ಥೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಬಿ. ಶ್ರೀರಾಮಲು ಸೇರಿದಂತೆ ಬಿಜೆಪಿಯ ರಾಜ್ಯ ಮಟ್ಟದ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.