ಬೀದರ್: ‘ಕರ್ನಾಟಕ ಜಾನಪದ ಅಕಾಡೆಮಿಯ 2023 ಹಾಗೂ 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿ ಪ್ರದಾನ ಸಮಾರಂಭ ಮಾ.15ರಂದು ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಜರುಗಲಿದೆ’ ಎಂದು ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಿ ವರ್ಷ ತಲಾ 30 ಜನ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ₹25 ಸಾವಿರ ನಗದು, ಸ್ಮರಣಿಕೆ ನೀಡಲಾಗುತ್ತದೆ. ತಜ್ಞ ಪ್ರಶಸ್ತಿಯೊಂದಿಗೆ ₹50 ಸಾವಿರ ನಗದು ಕೊಡಲಾಗುತ್ತದೆ. ಪುಸ್ತಕ ಬಹುಮಾನಕ್ಕೂ ₹50 ಸಾವಿರ ನಿಗದಿಗೊಳಿಸಲಾಗಿದೆ. ಆ ವಿಭಾಗದಲ್ಲಿ ಇಬ್ಬರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದು ವಿವರಿಸಿದರು.

‘ಮಾ.15ರಂದು ಬೆಳಿಗ್ಗೆ ನಗರದಲ್ಲಿ ಜಾನಪದ ಕಲಾವಿದರು, ಕಲಾ ತಂಡಗಳ ಮೆರವಣಿಗೆ ಜರುಗಲಿದೆ. ಬಳಿಕ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ಪ್ರದಾನ ಮಾಡುವರು. ಬೀದರ್ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಳ್ಳುವರು’ ಎಂದು ತಿಳಿಸಿದರು.

‘ಈಗಾಗಲೇ ರಾಜ್ಯದ ಗದಗ, ಚಿತ್ರದುರ್ಗ, ಮೈಸೂರು, ಚಾಮರಾಜನಗರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಸಂಘಟಿಸಿದ್ದೇವೆ. ಈ ಸಾಲಿನಲ್ಲಿ ಬೀದರ್ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಜಾನಪದ ಉಳಿಸಿ, ಬೆಳೆಸುವುದು ಇದರ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲ ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಹಾಗೂ ಇತರೆ ಸಂಘ– ಸಂಸ್ಥೆಗಳವರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಮಾತನಾಡಿ, ‘ಕಾರ್ಯಕ್ರಮಕ್ಕೆ ರಾಜ್ಯದ ಹಲವು ಜಿಲ್ಲೆಗಳಿಂದ ಕಲಾವಿದರು ಆಗಮಿಸಲಿದ್ದಾರೆ. ಅವರೆಲ್ಲರಿಗೂ ಊಟ, ವಸತಿ ಹಾಗೂ ಗೌರವ ಸಂಭಾವನೆ ನೀಡಲಾಗುತ್ತಿದೆ. ಕಾರ್ಯಕ್ರಮದಲ್ಲಿ ಜಾನಪದ ಶೈಲಿಯ ಆಹಾರದ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಹಾಜರಿದ್ದರು.

2023, 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ರಾಜ್ಯದ ವಿವಿಧ ಭಾಗದ 30 ಕಲಾವಿದರು ಕಲಾ ತಂಡಗಳ ಮೆರವಣಿಗೆ, ಸಾಂಸ್ಕೃತಿಕ ಕಲರವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.