ಜನಧ್ವನಿ ಸಮಾವೇಶ ವಿಫಲ: ಖೂಬಾ ಆರೋಪ

7

ಜನಧ್ವನಿ ಸಮಾವೇಶ ವಿಫಲ: ಖೂಬಾ ಆರೋಪ

Published:
Updated:
Deccan Herald

ಬೀದರ್: ‘ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಧ್ವನಿ ಸಮಾವೇಶದಲ್ಲಿ ಮುಖಂಡರಿಗೆ ಜನರನ್ನು ಸೇರಿಸಲು ಆಗಲಿಲ್ಲ. ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಕರೆ ತಂದು ಬೀಗುತ್ತಿದ್ದಾರೆ’ ಎಂದು ಬಿಜೆಪಿ ಸಂಸದ ಭಗವಂತ ಖೂಬಾ ಟೀಕಿಸಿದರು.

‘ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕರೆಯಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತನ್ನ ಶಕ್ತಿ ಪ್ರದರ್ಶನ ಮಾಡಲು ಹೋಗಿ ಎಡವಿದ್ದಾರೆ. ಕಾರ್ಯಕ್ರಮದಲ್ಲಿ ಎರಡು ಲಕ್ಷ ಜನ ಸೇರಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ’ ಎಂದು ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸೇರಿ ಕೆಲ ನಾಯಕರು ಬೀದರ್ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ವಾಸ್ತವ್ಯ ಹೂಡಿ ಜನಧ್ವನಿ ಸಮಾವೇಶ ಲೋಕಸಭೆ ಚುನಾವಣೆಗೆ ವೇದಿಕೆಯಾಗಲಿದೆ ಎಂದು ಹೇಳಿಕೆ ಕೊಟ್ಟಿದ್ದರು. ಕಾರ್ಯಕ್ರಮದ ತಯಾರಿ ಜೋರಾಗಿಯೇ ನಡೆಯಿತು. ಆದರೆ ನಿರೀಕ್ಷಿತ ಜನ ಸೇರಲಿಲ್ಲ’ ಎಂದರು.

ಮಾಧ್ಯಮಗೋಷ್ಠಿಯಲ್ಲಿ ಬಿಜೆಪಿ ಸ್ಲ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬು ವಾಲಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರಸಿಂಗ್ ಠಾಕೂರ್, ಬಾಬುರಾವ್ ಕಾರಭಾರಿ, ಜಯರಾಜ ಕಾಂಗೆ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !