ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಗನೀಲ’ ಸ್ಮರಣ ಸಂಪುಟ ಬಿಡುಗಡೆ ನಾಳೆ

Last Updated 23 ಜೂನ್ 2022, 16:17 IST
ಅಕ್ಷರ ಗಾತ್ರ

ಬೀದರ್: ನಗರದ ಅಂಬೇಡ್ಕರ್ ವೃತ್ತದ ಸಮೀಪ ಇರುವ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಜೂನ್ 25 ರಂದು ಬೆಳಿಗ್ಗೆ 11ಕ್ಕೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಡಾ. ಜಗನ್ನಾಥ ಹೆಬ್ಬಾಳೆ ಹಾಗೂ ಡಾ. ನೀಲಗಂಗಾ ಹೆಬ್ಬಾಳೆ ಅವರ ದಾಂಪತ್ಯ ಜೀವನದ ರಜತ ಮಹೋತ್ಸವದ ಸ್ಮರಣ ಸಂಪುಟ ‘ಜಗನೀಲ’ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ವತಿಯಿಂದ ಜರುಗಲಿರುವ ಕಾರ್ಯಕ್ರಮದಲ್ಲಿ ಚಿಂತಕ ಡಾ. ಗೋ.ರು. ಚನ್ನಬಸಪ್ಪ ಕೃತಿ ಬಿಡುಗಡೆ ಮಾಡುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸುವರು.

ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಚನ್ನಬಸಪ್ಪ ಹಾಲಹಳ್ಳಿ, ಸಾಹಿತಿ ಶ್ರೀಶೈಲ ನಾಗರಾಳ, ಬಿ.ಜಿ. ಶೆಟಕಾರ್ ಪಾಲ್ಗೊಳ್ಳುವರು. ಕೃತಿಯ ಪ್ರಧಾನ ಸಂಪಾದಕ ಪ್ರೊ. ಕಲ್ಯಾಣರಾವ್ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ಕರ್ನಾಟಕ ಸಾಹಿತ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಿಜಲಿಂಗಪ್ಪ ತಗಾರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT