ಖೊಟ್ಟಿ ದಾಖಲೆ ಸೃಷ್ಟಿಸಿ ಮೀಸಲು ಅರಣ್ಯ ಪ್ರದೇಶದ ಆಸ್ತಿ ಕಬಳಿಸಿದ್ದಾರೆ. ಜಮೀನಿಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ ಇತರರೊಂದಿಗೆ ತೆರವುಗೊಳಿಸಲಾದ ಜಾಗಕ್ಕೆ ನುಗ್ಗಿ ಸಸ್ಯ ಪ್ರಭೇದಗಳನ್ನು ನಾಶಪಡಿಸಲು ಯತ್ನಿಸಿದ್ದಾರೆ ಎಂದು ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ವಿ. ಜಾಧವ್ ನೀಡಿದ ದೂರಿನ ಮೇರೆಗೆ ಸೆ.11 ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.