ಚಿಟಗುಪ್ಪ: ಇಲ್ಲಿಯ ಗೌರಿಬಾಯಿ ಅಗ್ರವಾಲ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಗ್ನಿ ಬನ್ನಿರಾಯ ಜಯಂತಿ ಆಚರಿಸಲಾಯಿತು.

ಪ್ರಾಚಾರ್ಯ ವಿಜಯಕುಮಾರ ಪಾಟೀಲ ಅವರು ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಿ ಮಾತನಾಡಿ,‘ಜಯಂತಿಗಳು ಜೀವನಕ್ಕೆ ಬೆಳಕಾಗಬೇಕು. ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಜೀವನಕ್ಕೆ ಅರ್ಥ ಬರುತ್ತದೆ’ ಎಂದರು.

ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ಬಹುಮಾನ ವಿತರಿಸಲಾಯಿತು.

ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಜಾನಪದ ಶೈಲಿಯ ಸಮೂಹ ನೃತ್ಯ, ಕೋಲಾಟ, ಕುಣಿತ ಕಲೆ ಪ್ರದರ್ಶಿಸಿದರು.

ಮುಖ್ಯ ಶಿಕ್ಷಕರಾದ ರತ್ನಪ್ಪ ನೇಲವಾಳ, ಅಶೋಕ ಮಠಪತಿ, ಡಿ.ಶಂಕರ್, ಉಪನ್ಯಾಸಕರಾದ ಆನಂದ ರಾಜು, ಪ್ರೇಮಲತಾ ಸ್ವಾಮಿ, ಭೀಮಶಾ ಕೆರಳಿ, ಸುಮಂಗಲಾ, ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು, ಪದವಿ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಇದ್ದರು.

ನೀಲಕಂಠ ಇಸ್ಲಾಮಪುರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.