ಮಂಗಳವಾರ, ಮೇ 17, 2022
27 °C

ಯುಗಮಾನೋತ್ಸವಕ್ಕೆ ಜಯಸಿದ್ಧೇಶ್ವರ ಶಿವಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರದಲ್ಲಿ ಏಪ್ರಿಲ್ 23 ರಂದು ನಡೆಯಲಿರುವ ಶ್ರೀ ಜಗದ್ಗುರು ಪಂಚಾಚಾರ್ಯ ಜಯಂತಿ ಯುಗಮಾನೋತ್ಸವದಲ್ಲಿ ಸೋಲಾಪೂರದ ಸಂಸದ, ಪ್ರಖರ ವಾಗ್ಮಿ ಡಾ. ಜಯಸಿದ್ಧೇಶ್ವರ ಶಿವಾಚಾರ್ಯ ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸದಸ್ಯರೂ ಆದ ಯುಗಮಾನೋತ್ಸವ ಸಮಿತಿಯ ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಿಯೋಗದಲ್ಲಿ ಅವರನ್ನು ಭೇಟಿ ಮಾಡಿ ಯುಗಮಾನೋತ್ಸವಕ್ಕೆ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಡಾ. ಜಯಸಿದ್ಧೇಶ್ವರ ಶಿವಾಚಾರ್ಯರು ಮೊದಲ ಬಾರಿಗೆ ಬೀದರ್ ನಗರಕ್ಕೆ ಬರಲಿದ್ದಾರೆ. ಅವರ ಆಗಮನದಿಂದಾಗಿ ರಂಭಾಪುರಿ ಹಾಗೂ ಕೇದಾರ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಯುಗಮಾನೋತ್ಸವದ ಮೆರುಗು ಇನ್ನಷ್ಟು ಹೆಚ್ಚಲಿದೆ ಎಂದು ತಿಳಿಸಿದ್ದಾರೆ.

ಯುಗಮಾನೋತ್ಸವಕ್ಕೆ ಈಗಾಗಲೇ ಭರದ ಸಿದ್ಧತೆಗಳು ನಡೆದಿವೆ. ಭಕ್ತರು ಸ್ವಯಂ ಪ್ರೇರಣೆಯಿಂದ ಯುಗಮಾನೋತ್ಸವದ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಪರಕಾಲ್ ನಗರಸಭೆ ಸದಸ್ಯ ಭದ್ರಯ್ಯ ಕೋಲನಪಾಕ್, ಅಂತರರಾಷ್ಟ್ರೀಯ ಹಿಂದೂ ಸಂಘರ್ಷ ಸಮಿತಿಯ ಅಧ್ಯಕ್ಷ ಅರುಣ ಉಪಾಧ್ಯಾಯ, ತೆಲಂಗಾಣ ಜಂಗಮ ಸಮಾಜದ ನಾಗಯ್ಯ ಸ್ವಾಮಿ, ಅಜಯಕುಮಾರ ಬೋಧನ್, ವಿದ್ಯಾಭೂಷಣ ನಿಯೋಗದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.