ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲ್ಯಾಣ’ ಗೆದ್ದರೆ ಕರ್ನಾಟಕ ಗೆಲ್ಲುವುದು ನಿಶ್ಚಿತ: ಎಚ್‌.ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಕುಮಮಾರಸ್ವಾಮಿ ಆಶಾಭಾವನೆ
Last Updated 9 ಏಪ್ರಿಲ್ 2021, 2:03 IST
ಅಕ್ಷರ ಗಾತ್ರ

ಬಸವಕಲ್ಯಾಣ: ‘ಕಲ್ಯಾಣ ಗೆದ್ದರೆ 2023ರ ಚುನಾವಣೆಯಲ್ಲಿ ಇಡೀ ಕರ್ನಾಟಕದಲ್ಲಿ ಬಹುಮತ ಪಡೆಯುವುದು ನಿಶ್ಚಿತ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಉಪ ಚುನಾವಣೆ ಅಂಗವಾಗಿ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆಯಿಂದ ಆಯೋಜಿಸಿದ್ದ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್‌ನವರು ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್ ಎಂದು ಗೂಬೆ ಕೂಡಿಸಿ ನಮ್ಮ ಬಗ್ಗೆ ಸಂಶಯ ಬರುವಂತೆ ಮಾಡಿದ್ದಾರೆ. ಆದ್ದರಿಂದ ಯಸ್ರಬ್ ಅಲಿ ಅವರನ್ನು ಗೆಲ್ಲಿಸಿ ರಾಜ್ಯದ ಜನತೆಯಲ್ಲಿ ನಮ್ಮ ಬಗ್ಗೆ ವಿಶ್ವಾಸ ಮೂಡಿಸಬೇಕಾಗಿದೆ. ಯಾರು ಏನಾದರು ಆರೋಪಿಸಿದರೂ ಅದಕ್ಕೆ ಬಗ್ಗುವುದಿಲ್ಲ. ಜಾತ್ಯತೀತ ಮನೋಭಾವನೆ ನಮ್ಮದಾಗಿದ್ದು ಅದನ್ನು ಸಾಬೀತು ಮಾಡಿ ತೋರಿಸುತ್ತೇವೆ’ ಎಂದರು.

‘ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ನಿಲ್ಲಿಸಿದರೆ ಈ ಸಮುದಾಯಕ್ಕೆ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ ಎಂಬ ಕಾರಣಕ್ಕೆ ದೇವರ ಅನುಗ್ರಹದಂತೆ ಯಸ್ರಬ್ ಅಲಿ ಅವರಿಗೆ ಟಿಕೆಟ್ ನೀಡಿದ್ದೇನೆ. ಇದು ಖಾದ್ರಿ ಅವರದಷ್ಟೇ ಅಲ್ಲ; ನನ್ನ ಹಾಗೂ ಜೆಡಿಎಸ್‌ನ ಪ್ರತಿಷ್ಠೆಯ ಚುನಾವಣೆಯಾಗಿದೆ’ ಎಂದು ಹೇಳಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್‌, ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಝಪರುಲ್ಲಾ ಖಾನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT