ಶುಕ್ರವಾರ, ಮಾರ್ಚ್ 24, 2023
22 °C

16 ರಂದು ಜಿಲ್ಲೆಗೆ ಜೆಡಿಎಸ್ ವೀಕ್ಷಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಬೀದರ್: ಜಾತ್ಯತೀತ ಜನತಾ ದಳದ ಬೀದರ್ ವೀಕ್ಷಕರಾದ ನಾಸಿರ್ ಹುಸೇನ್ ವಸ್ತಾದ್ ಮತ್ತು ಮಿನಹಳ್ಳಿ ಡಿ. ತಾಯಣ್ಣ ಅವರು ಜುಲೈ 16 ರಂದು ಜಿಲ್ಲೆಗೆ ಬರಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ ತಿಳಿಸಿದ್ದಾರೆ.

ಪ್ರತಿ ತಾಲ್ಲೂಕುಗಳಿಗೆ ಭೇಟಿ ಕೊಟ್ಟು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ ಅವರ ಅಧ್ಯಕ್ಷತೆಯಲ್ಲಿ ಜುಲೈ 16 ರಂದು ಬೆಳಿಗ್ಗೆ 11ಕ್ಕೆ ಬಸವಕಲ್ಯಾಣ ನಗರದಲ್ಲಿ ಬಸವಕಲ್ಯಾಣ ಹಾಗೂ ಹುಲಸೂರು ತಾಲ್ಲೂಕುಗಳ ಸಭೆ, ಮಧ್ಯಾಹ್ನ 3ಕ್ಕೆ ಹುಮನಾಬಾದ್‍ನಲ್ಲಿ ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕುಗಳ ಸಭೆ ನಡೆಯಲಿದೆ.

ಜು. 17 ರಂದು ಬೆಳಿಗ್ಗೆ 11ಕ್ಕೆ ಔರಾದ್ ಪಟ್ಟಣದಲ್ಲಿ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳ ಸಭೆ ಜರುಗಲಿದೆ ಎಂದು ತಿಳಿಸಿದ್ದಾರೆ.

ಜು. 18 ರಂದು ಬೆಳಿಗ್ಗೆ 11ಕ್ಕೆ ಬೀದರ್‍ನ ಜಿಲ್ಲಾ ಘಟಕದ ಕಚೇರಿಯಲ್ಲಿ ಬೀದರ್ ವಿಧಾನಸಭಾ ಕ್ಷೇತ್ರದ ಸಭೆ, ಮಧ್ಯಾಹ್ನ 3ಕ್ಕೆ ಕಾಶೆಂಪೂರ್ ಗ್ರಾಮದ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರ ಮನೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.