ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಪಿಯು ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಜೆಇಇ(ಮೇನ್ಸ್) ಆರ್ಕಿಟೆಕ್ಚರ್ ವಿಭಾಗದಲ್ಲಿ ಉತ್ತಮ ರ‍್ಯಾಂಕ್ ಪಡೆದು ಗಡಿ ಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿ ಕೇದಾರ್ ಸುರೇಶಬಾಬು ರಾಷ್ಟ್ರಮಟ್ಟದಲ್ಲಿ 207ನೇ ರ‍್ಯಾಂಕ್ ಪಡೆದಿದ್ದಾರೆ.
ಇನ್ನು ಶ್ರೀಧರರೆಡ್ಡಿ ಡಿಗಂಬರರೆಡ್ಡಿ 435, ನಾಗರಾಜ ಹಾಲಿಮನಿ 723 ಮತ್ತು ವೈಷ್ಣವಿ ಚಂದ್ರಕಾಂತ 995ನೇ ರ‍್ಯಾಂಕ್ ಪಡೆದು ಗಮನಾರ್ಹ ಸಾಧನೆ ತೋರಿದ್ದಾರೆ.
ಈಗಾಗಲೇ ಜೆಇಇ ಮೇನ್ಸ್, ಸಿಇಟಿಯಲ್ಲಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಪಡೆದಿದ್ದು, ನೀಟ್ ಪರೀಕ್ಷೆಯ ಫಲಿತಾಂಶದಲ್ಲಿಯೂ ನೂರಾರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಉತ್ತಮ ರ‍್ಯಾಂಕ್ ಪಡೆಯುವ ವಿಶ್ವಾಸವಿದೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ, ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ಅಭಿನಂದಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.