ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇಇ: ಡೈಮಂಡ್ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

Published 14 ಫೆಬ್ರುವರಿ 2024, 15:53 IST
Last Updated 14 ಫೆಬ್ರುವರಿ 2024, 15:53 IST
ಅಕ್ಷರ ಗಾತ್ರ

ಭಾಲ್ಕಿ: ಪಟ್ಟಣದ ಡೈಮಂಡ್ ಸ್ವತಂತ್ರ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿ ಅರುಣ ವೀರಣ್ಣ 96.23 ಪರ್ಸೆಂಟೈಲ್ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ ಎಂದು ಕಾಲೇಜಿನ ಅಧ್ಯಕ್ಷ ಎಸ್.ಕೆ.ಮಸ್ತಾನವಲಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳಾದ ಸಾಯಿಕಿರಣ ಸುರೇಶ 95, ಅರ್ಜುನ ತ್ರಿಂಬಕ್ 93.37, ಪ್ರಾರ್ಥನಾ ಅರ್ಜುನ 91.15, ರಾಹುಲ್ ಪ್ರಭಾಕರ 91.09, ರುಚಿತಾ ಸಂಜುಕುಮಾರ 90, ವೇದಾಂತ ನರಸಿಂಗ್ 88.32, ಲೋಕೇಶ ಗಣೇಶ 88.26, ಶಿವಲಿಂಗ ಗಂಗಾಧರ 88 ಪರ್ಸೆಂಟೈಲ್ ಸೇರಿದಂತೆ ಸುಮಾರು 125 ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ಬರೆಯಲು ಅರ್ಹತೆ ಗಿಟ್ಟಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾರ್ಯದರ್ಶಿ ವೈ.ಮಾಧವರಾವ್, ಮುಖ್ಯ ಆಡಳಿತಾಧಿಕಾರಿ ಅಶ್ವಿನ್ ಭೋಸ್ಲೆ, ಆಡಳಿತಾಧಿಕಾರಿಗಳಾದ ಗಿರೀಶ ಭಂಡಾರಿ, ಮಂಜುನಾಥ ಜೋಳದಾಪಕೆ, ಜ್ಞಾನೇಶ್ವರ ಬಿರಾದಾರ, ರೆಹಮಾನ್ ಸೇರಿದಂತೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಅರುಣ ವೀರಣ್ಣ
ಅರುಣ ವೀರಣ್ಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT