ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಸೂರ: ಜೆಜೆಎಂ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

Published 11 ಫೆಬ್ರುವರಿ 2024, 16:20 IST
Last Updated 11 ಫೆಬ್ರುವರಿ 2024, 16:20 IST
ಅಕ್ಷರ ಗಾತ್ರ

ಹುಲಸೂರ: ತಾಲ್ಲೂಕಿನ ಗೋರಟಾ (ಬಿ) ಹಾಗೂ ಕಾದೇಪುರ ಗ್ರಾಮದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನೀರು ಒದಗಿಸುವ ಕಾರ್ಯಕ್ರಮಕ್ಕೆ ಶಾಸಕ ಶರಣು ಸಲಗರ ಗುದ್ದಲಿ ಪೂಜೆ ನೆರವೇರಿಸಿದರು.

ಈ ವೇಳೆ ಶಾಸಕ ಶರಣು ಸಲಗರ ಮಾತನಾಡಿ, 2022-23ನೇ ಸಾಲಿನಲ್ಲಿ ಜೆಜೆಎಂ ಯೋಜನಯಡಿ ಗೋರಟಾ ಗ್ರಾಮದಲ್ಲಿ ₹ 1 ಕೋಟಿ 79 ಲಕ್ಷ ಹಾಗೂ ಕಾದೇಪುರ ಗ್ರಾಮದಲ್ಲಿ ₹ 1 ಕೋಟಿ 78 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಡೆಸಲು ಅನುಮೋದನೆ ದೊರೆತಿದೆ. ಗೋರಟಾದ 835, ಕಾದೇಪುರ ಗ್ರಾಮದ 365 ಮನೆಗಳಿಗೆ ನಳಗಳ ಜೋಡಣೆ ಕಾಮಗಾರಿಗಳಿಗೂ ಕೆಲಸ ವೇಗವಾಗಿ ನಡೆಯುತ್ತಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಶ್ರಮಿಸಲಾಗುವುದು’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ ಸಹಾಯಕ ನಿರ್ದೇಶಕ ಮಹದೇವ ಜಮ್ಮು, ಮುಚಳಂಬ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂದೀಪ ಬಿರಾದಾರ, ಗೋರಟಾ ಪಿಡಿಒ ಸಿದ್ದಲಿಂಗ ಸೇರಿ ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಸೇರಿ ಹಲವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT