ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಬಶೆಟ್ಟಿಯಿಂದ ಗೊಂದಲ ಮೂಡಿಸುವ ಯತ್ನ: ಆರೋಪ

Last Updated 11 ಜನವರಿ 2020, 16:10 IST
ಅಕ್ಷರ ಗಾತ್ರ

ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಲ್ಪಸಂಖ್ಯಾತರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಆರೋಪಿಸಿದ್ದಾರೆ.

ಜಾಬಶೆಟ್ಟಿ ಅವರು ಸಂಸದ ಭಗವಂತ ಖೂಬಾ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆ ನೀಡಿದ್ದಾರೆ. ಇದು ಅವರು ಮಾನಸಿಕವಾಗಿ ಹತಾಶಗೊಂಡಿರುವುದನ್ನು ತೋರಿಸುತ್ತದೆ. ಜಿಲ್ಲೆಯ ಜನ ಈ ರೀತಿಯ ಹೇಳಿಕೆಗಳಿಗೆ ಕಿವಿಗೊಡಬಾರದು ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಪಘಾನಿಸ್ತಾನದಲ್ಲಿ ಕಿರುಕುಳಕ್ಕೆ ಒಳಗಾಗಿ ಆಶ್ರಯ ಕೋರಿ ಭಾರತಕ್ಕೆ ಬಂದ ಹಿಂದೂ, ಸಿಖ್ಖ, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ನಾಗರಿಕತ್ವ ಕೊಡುವುದರಲ್ಲಿ ತಪ್ಪೇನಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಪೌರತ್ವವನ್ನೂ ಕಸಿದುಕೊಳ್ಳುವುದಿಲ್ಲ. ಮುಸ್ಲಿಮರ ಮೂಲಭೂತ ಹಕ್ಕುಗಳಿಗೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದಿದ್ದಾರೆ.

ಸಂಸದ ಭಗವಂತ ಖೂಬಾ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರ ಪರಿಣಾಮವಾಗಿ ಅಲ್ಪಸಂಖ್ಯಾತರೂ ಕಾಯ್ದೆಗೆ ಬೆಂಬಲ ಕೊಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್ಲರೂ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿಗೆ ಬೆಂಬಲ ಕೊಡಬೇಕು. ಈ ಮೂಲಕ ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT