ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ ಸ್ವಚ್ಛತೆಗೆ ಕೈಜೋಡಿಸಿ

ಅರುಣೋದಯ ಶಾಲೆಯಲ್ಲಿ ಸ್ವಚ್ಛತೆ ಜಾಗೃತಿ ಕಾರ್ಯಕ್ರಮ
Last Updated 1 ಅಕ್ಟೋಬರ್ 2022, 13:02 IST
ಅಕ್ಷರ ಗಾತ್ರ

ಬೀದರ್: ನಗರ ಸ್ವಚ್ಛತೆಗೆ ಸಾರ್ವಜನಿಕರು ನಗರಸಭೆಯೊಂದಿಗೆ ಕೈಜೋಡಿಸಬೇಕು ಎಂದು ನಗರಸಭೆ ಆರೋಗ್ಯ ನಿರೀಕ್ಷಕ ನಾಗೇಶ ಸಪಾಟೆ ಮನವಿ ಮಾಡಿದರು.

ನಗರದ ಋಷಿಕೇಶ ಶಿಕ್ಷಣ ಸಂಸ್ಥೆ ಸಂಚಾಲಿತ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸ್ವಚ್ಛತೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನೆಯಲ್ಲಿ ಸಂಗ್ರಹವಾಗುವ ಕಸವನ್ನು ಹಸಿ, ಒಣ ಹಾಗೂ ಹಾನಿಕಾರಕ ಆಗಿ ವಿಂಗಡಿಸಿ, ತಪ್ಪದೆ ನಗರಸಭೆ ಕಸ ಸಂಗ್ರಹ ವಾಹನಗಳಲ್ಲಿ ಹಾಕಬೇಕು ಎಂದು ತಿಳಿಸಿದರು.

ಸ್ವಚ್ಛ ಹಾಗೂ ಸುಂದರ ಪರಿಸರಕ್ಕಾಗಿ ಕಸ ಎಲ್ಲೆಂದರಲ್ಲಿ ಎಸೆಯಬಾರದು. ಪ್ಲಾಸ್ಟಿಕ್ ಬದಲು ಬಟ್ಟೆಯ ಚೀಲಗಳನ್ನು ಬಳಸಬೇಕು ಎಂದು ಹೇಳಿದರು.

ಸಹ ಶಿಕ್ಷಕಿ ಸಾರಿಕಾ ಬಿರಾದಾರ ಅವರು ಸ್ವಚ್ಛತೆ ಕುರಿತು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಿದರು.

ಋಷಿಕೇಶ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಂತೋಷ ಮಂಗಳೂರೆ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಮೇಲ್ವಿಚಾರಕ ಶರಣಪ್ಪ ಜಳಕೋಟೆ, ಪ್ರೌಢಶಾಲೆ ಮುಖ್ಯಶಿಕ್ಷಕಿ ಈಶ್ವರಿ ಬೇಲೂರೆ, ಪಾಥಮಿಕ ಶಾಲೆ ಮುಖ್ಯಶಿಕ್ಷಕ ಬಸವರಾಜ ಮುಗುಟಾಪುರೆ, ಶಿಕ್ಷಕಿಯರಾದ ಸುನೀತಾ ಕಾಜಿ, ಪೂಜಾ ಕಡ್ಡೆ, ಚಂದ್ರಕಲಾ ಸ್ವಾಮಿ, ನೀಲಮ್ಮ ಗಜಲೆ, ಸುವರ್ಣಾ ಪಾಟೀಲ, ಸುಧಾ ಉಪ್ಪೆ, ಸಪ್ನಾರಾಣಿ ಪಾಟೀಲ, ಪಾರ್ವತಿ ಬಿರಾದಾರ, ರೇಖಾ ಪಾಟೀಲ, ಶೈಲಜಾ ಸ್ವಾಮಿ, ಪೂಜಾರಾಣಿ, ಮೇಘಾ ಕಾಜಿ, ಅನುಸೂಯಾ ಎಂ, ಆಶಾ ಬಿ. ಪುರುಷೋತ್ತಮ, ಮಾರುತೆಪ್ಪ ಗೌನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT