ಸೋಮವಾರ, ಮೇ 17, 2021
21 °C

‘ಕೊರೊನಾ ತಡೆಗೆ ಕೈಜೋಡಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಕೋವಿಡ್ ಸೋಂಕು ತಡೆಗೆ ಸಾರ್ವಜನಿಕರು ಜಿಲ್ಲಾ ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರ ಸತ್ಯನಾರಾಯಣಾಚಾರ್ಯ ಮನವಿ ಮಾಡಿದ್ದಾರೆ.

ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಬೀದರ್ ಜಿಲ್ಲೆ ಕೂಡ ಇದಕ್ಕೆ ಹೊರತಾಗಿಲ್ಲ. ಕೋವಿಡ್ ಸೋಂಕನ್ನು ಸಾರ್ವಜನಿಕರು ನಿರ್ಲಕ್ಷಿಸಬಾರದು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು ಎಂದು ತಿಳಿಸಿದ್ದಾರೆ.

ಅರ್ಹರು ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆಗಾಗಿ ಆನ್‍ಲೈನ್ ನೋಂದಣಿ ಹಾಗೂ ವಾಕ್ ಇನ್ ನೋಂದಣಿ ಲಭ್ಯ ಇದೆ ಎಂದು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.