ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಡಿಕೇಟ್ ಸದಸ್ಯರಾಗಿ ಜೋಶಿ: ಸತ್ಕಾರ

Last Updated 3 ಮಾರ್ಚ್ 2023, 15:53 IST
ಅಕ್ಷರ ಗಾತ್ರ

ಬೀದರ್: ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕಗೊಂಡ ಎಸ್.ಆರ್. ಜೋಶಿ ಅವರನ್ನು ಇಲ್ಲಿಯ ಇಂಡಿಯನ್ ಕಾಲೇಜ್ ಆಫ್ ಎಜುಕೇಷನ್ ಫಾರ್ ವುಮೆನ್ಸ್‍ನಲ್ಲಿ ಸನ್ಮಾನಿಸಲಾಯಿತು.

ಕಲಬುರಗಿಯ ಡೆಕ್ಕನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಖುರ್ಷಿದ್ ಖಾನ್ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಸತ್ಕರಿಸಿದರು.

ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವವರಿಗೆ ಉನ್ನತ ಹುದ್ದೆಗಳು ಒಲಿದು ಬರುತ್ತವೆ. ಅದಕ್ಕೆ ಜೋಶಿ ಅವರೇ ನಿದರ್ಶನವಾಗಿದ್ದಾರೆ ಎಂದು ಅವರು ಹೇಳಿದರು.

ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT