ಬೀದರ್: ಸಮಾಜ ಸುಧಾರಕ ಜ್ಯೋತಿಬಾ ಫುಲೆ ಅವರ ಜನ್ಮದಿನದ ಅಂಗವಾಗಿ ಏ. 11ರಂದು ಸಂಜೆ 5ಕ್ಕೆ ತೆಲಂಗಾಣದ ಹೈದರಾಬಾದಿನ ಕುತ್ತಬುಳ್ಳಾಪುರ ಮುನ್ಸಿಪಾಲಿಟಿ ಕಚೇರಿ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಭೀಮರಾಜ ಸೇನಾ ಸಂಸ್ಥಾಪಕ ಅಧ್ಯಕ್ಷ ರಾಜೇಶ ಕಾಂಬಳೆ ತಿಳಿಸಿದರು.

ಸಮಾಜದಲ್ಲಿ ಸಮಾನತೆ, ಏಕತೆ ಮತ್ತು ನ್ಯಾಯದ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಅಧ್ಯಕ್ಷ ರಾಮದಾಸ ಬಂಧು ಅಠಾವಳೆ, ಭಂತೆ ಹರ್ಷಬೋಧಿ (ಭಂತೆಜಿ) ಪಾಲ್ಗೊಳ್ಳುವರು. ಭೀಮರಾಜ ಸೇನಾದಿಂದ ಈಗಾಗಲೇ ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮಹಾತ್ಮ ಫುಲೆ ಅವರ ಪರಂಪರೆಯನ್ನು ಗೌರವಿಸುವುದರ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಚಿಂತನೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಬನ್ನಿ, ಪ್ರೇರಣೆ ಪಡೆಯಿರಿ, ಬದಲಾವಣೆಯ ಭಾಗವಾಗಿರಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಬಳೆ ಕೋರಿದರು.

ಬೀಮರಾಜ ಸೇನಾ ಸಂಘಟನೆಯ ಪ್ರಮುಖರಾದ ಅಶೋಕ ಕಾಂಬಳೆ, ಪ್ರಲ್ಹಾದ ದೊಡ್ಡಿ, ಹರ್ಷಿತ ದಂಡೇಕರ್, ಪ್ರಕಾಶ ರಾವಣ, ದಿಲೀಪ ರೇಖಿ, ರಾಜು ಜಾತೋತ್, ಶಿವು ಸಾಗರ, ಅಶೋಕ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-33-1022342995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.