ಓಂಕಾರ ಬಿರಾದಾರ

ಕಲಬುರಗಿ: ಇಲ್ಲಿನ ಕಲಬುರಗಿ–ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ರೈತರಿಗೆ ಶೂನ್ಯ ಬಡ್ಡಿದರದ ಸಾಲ ಮಂಜೂರು ಮಾಡಿ ಜಮೀನಿನ ಮೇಲೆ ಋಣಭಾರ ನಮೂದಿಸಿ ಏಳು ತಿಂಗಳಾದರೂ ಸಾಲದ ಹಣ ಪಾವತಿಸಿಲ್ಲ. ಜಮೀನಿನ ಮೇಲೆ ಋಣಭಾರ ಇರುವುದರಿಂದ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ಗಳಲ್ಲೂ ಸಾಲ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ 1100ಕ್ಕೂ ಹೆಚ್ಚು ರೈತರು ಈ ಸಮಸ್ಯೆ ಎದುರಿಸುತ್ತಿದ್ದಾರೆ.

ರೈತರು ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಋಣಭಾರ ದಾಖಲಿಸಲಾಗಿದೆ. ಕೆಲ ರೈತರಿಗೆ ಸಾಲದ ಹಣ ಪಾವತಿಗೆ ಚೆಕ್ಗಳನ್ನು ನೀಡಲಾಗಿದೆ. ಆದರೆ, ಹಣ ಬಿಡುಗಡೆ ಮಾಡದಿರುವುದರಿಂದ ರೈತರು ಬ್ಯಾಂಕ್ಗೆ ಕೊಟ್ಟ ಚೆಕ್ಗಳು ಬೌನ್ಸ್ ಆಗಿವೆ.

ಬ್ಯಾಂಕ್ನಿಂದ ಹಣ ಸಿಗುವ ನಿರೀಕ್ಷೆಯಲ್ಲಿರುವ ರೈತರು ಖಾಸಗಿಯಾಗಿ ಸಾಲ ಮಾಡಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಆದರೆ, ಏಳು ತಿಂಗಳಾದರೂ ಹಣ ಬಾರದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.

ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ಕೃಷಿ ಪತ್ತಿನ ಸಹಕಾರ ಬ್ಯಾಂಕ್ಗಳ ಸಹಯೋಗದಲ್ಲಿ ಹೈನುಗಾರಿಕೆ ಪ್ರೋತ್ಸಾಹ ನೀಡಲು ಪ್ರತಿ ಸಂಘದಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಆದರೆ ಶೇ 20ರಷ್ಟು ಫಲಾನುಭವಿಗಳಿಗೆ ಮಾತ್ರ ಹಣ ಒದಗಿಸಲಾಗಿದೆ. ಉಳಿದ ರೈತರ ಅರ್ಜಿ ವಿಲೇವಾರಿ ಮಾಡಿ, ಸಾಲ ನೀಡಿಲ್ಲ. ಇದರಿಂದ ಹೈನುಗಾರಿಕೆ ಮಾಡಿ ಜೀವನ ಸಾಗಿಸುವ ಬಡವರ ಕನಸಿಗೂ ತಣ್ಣೀರು ಎರಚಿದಂತಾಗಿದೆ.

ರಾಜ್ಯ ಸರ್ಕಾರವು ಪೂರಕ ಬಜೆಟ್ನಲ್ಲಿ ₹ 5 ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡುವುದಾಗಿ ಘೋಷಿಸಿದೆ. ಅದರಂತೆ ಅರ್ಜಿ ಪಡೆದು ಹೊಸ ಸಾಲ ಮಂಜೂರು ಮಾಡುವ ಮೂಲಕ ಸಂಕಷ್ಟ ನಿವಾರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.