ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ಜಾಂಬೊರೇಟ್‌ಗೆ ತೆರೆ

Published 13 ಫೆಬ್ರುವರಿ 2024, 9:04 IST
Last Updated 13 ಫೆಬ್ರುವರಿ 2024, 9:04 IST
ಅಕ್ಷರ ಗಾತ್ರ

ಬೀದರ್‌: ಕಲ್ಯಾಣ ಕರ್ನಾಟಕದ ಮೊದಲ ಜಾಂಬೊರೇಟ್‌ಗೆ ಸೋಮವಾರ ನಗರದಲ್ಲಿ ತೆರೆ ಬಿತ್ತು. ಮುಂದಿನ ವರ್ಷದ ಜಾಂಬೊರೇಟ್ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿದೆ.

ನಗರದ ಶಹಾಪುರ ಗೇಟ್‌ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಐದು ದಿನಗಳ ಜಾಂಬೊರೇಟ್‌ನಲ್ಲಿ ಏಳು ಜಿಲ್ಲೆಗಳ ಒಟ್ಟು 3,500 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಾಹಸ ಪ್ರದರ್ಶನ, ಯೋಗ, ಧ್ಯಾನ, ಪ್ರಬಂಧ ಮಂಡನೆ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅವರ ಪ್ರತಿಭೆ ಪ್ರದರ್ಶಿಸಿದರು.

ಜಾಂಬೊರೇಟ್ ಸಂಯೋಜಕಿ ಮಲ್ಲೇಶ್ವರಿ ಜುಜಾರೆ ಅವರು ಸರ್ವಧರ್ಮ ಪ್ರಾರ್ಥನೆ ನಡೆಸಿಕೊಟ್ಟರು. ಬಳಿಕ ಧ್ವಜಾರೋಹಣ ಜರುಗಿತು. ಜಾಂಬೊರೇಟ್‍ನಲ್ಲಿ ಪಾಲ್ಗೊಂಡಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಬಳಿಕ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ರಾಜ್ಯದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ಇದೆ ಎಂದು ತಿಳಿಸಿದರು.

ಆಣದೂರಿನ ಭಂತೆ ಜ್ಞಾನಸಾಗರ, ಗುರುದ್ವಾರದ ದರ್ಬಾರ್‌ ಸಿಂಗ್, ಜಾಂಬೊರೇಟ್ ಮುಖ್ಯಸ್ಥ ಅಬ್ದುಲ್ ಖದೀರ್, ಹೆಚ್ಚುವರಿ ಮುಖ್ಯಸ್ಥೆ ಗುರಮ್ಮ ಸಿದ್ಧಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್.ಬಿ. ಭರಶೆಟ್ಟಿ, ಖಜಾಂಚಿ ತೌಸಿಫ್, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಬ್ದುಲ್ ಹಸೀಬ್, ಅಬ್ದುಲ್ ಮುಖಿತ್, ಅಫ್ರನಾಜ್ ತೌಸಿಫ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT