ಬೀದರ್: ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ನಗರದ ನೆಹರೂ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಆನಂತರ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್, ಸಿಆರ್ ಪಿಎಫ್, ಗೃಹರಕ್ಷಕ ದಳ, ಎನ್ ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ಇತರೆ ತುಕಡಿಗಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದವು.

ಹಲವರ ತ್ಯಾಗ, ಹೋರಾಟದಿಂದ ಕಲ್ಯಾಣ ಕರ್ನಾಟಕ ವಿಮೋಚನೆಗೊಂಡಿದೆ. ಈ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್,ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮತ್ತಿತರರು ಹಾಜರಿದ್ದರು.

ಧ್ವಜಾರೋಹಣಕ್ಕೂ ಮುನ್ನ ನಗರದ ಬಸವೇಶ್ವರ ವೃತ್ತದಿಂದ ನೆಹರೂ ಕ್ರೀಡಾಂಗಣದ ವರೆಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರದ ಮೆರವಣಿಗೆ ಅಲಂಕೃತ ವಾಹನದಲ್ಲಿ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.