ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಕೊಡುಗೆ ಶ್ಲಾಘನೀಯ’

Last Updated 17 ಸೆಪ್ಟೆಂಬರ್ 2022, 12:30 IST
ಅಕ್ಷರ ಗಾತ್ರ

ಹುಲಸೂರ: ‘ಭಾರತ ಮಾನವೀಯ ಮೌಲ್ಯಗಳ ತವರು’ ಎಂದು ಉಪನ್ಯಾಸಕಿ ಮಲ್ಲಮ್ಮ.ಆರ್.ಪಾಟೀಲ ಅಭಿಪ್ರಾಯಪಟ್ಟರು.

ತಾಲ್ಲೂಕು ಆಡಳಿತದ ವತಿಯಿಂದ ಇಲ್ಲಿನ ಗುರು ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ,‘ಹೈದರಾಬಾದ್‌ ಕರ್ನಾಟಕದ ವಿಮೋಚನೆಯಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪಾತ್ರ ಮಹತ್ವದ್ದು’ ಎಂದು ಹೇಳಿದರು.

ತಹಶೀಲ್ದಾರ್ ಶಿವಾನಂದ ಮೇತ್ರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಗುರು ಬಸವೇಶ್ವರ ಸಂಸ್ಥಾನ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹಾವಣ್ಣ ನಿರೂಪಿಸಿದರು.

ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಹಾದೇವ ಬಾಬೂಳಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಪಾಟೀಲ, ರಾಜ್ಯ ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೂರ್ಯಕಾಂತ ಅಡಿಕೆ, ಗ್ರಾ.ಪಂ. ಉಪಾಧ್ಯಕ್ಷೆ ಸರಸ್ವತಿ.ಬಿ.ಬಾಲಕುಂದೆ ಸೇರಿ ಪಟ್ಟಣದ ಶಾಲಾ–ಕಾಲೇಜುಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT