ಬೀದರ್: ಇಲ್ಲಿಯ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಆಡಳಿತದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಆದ ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಧ್ವಜಾರೋಹಣ ನೆರವೇರಿಸಿದರು.

ಸಚಿವರು ಕೆಎಸ್‌ಆರ್‌ಪಿ, ಜಿಲ್ಲಾ ಸಶಸ್ತ್ರ ಪಡೆ, ಪೊಲೀಸ್ ಪಡೆ, ಗೃಹರಕ್ಷಕ ದಳ, ಮಹಿಳಾ ಪೊಲೀಸ್ ಸಿಬ್ಬಂದಿ ಪರೇಡ್ ವೀಕ್ಷಣೆ ಮಾಡಿದರು. ನಂತರ ಕೋವಿಡ್ ವಾರಿಯರ್ಸ್‌ಗಳನ್ನು ಸನ್ಮಾನಿಸಿದರು.

ಶಾಸಕರಾದ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಅರವಿಂದಕುಮಾರ ಅರಳಿ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.