ಚಿಟಗುಪ್ಪ (ಹುಮನಾಬಾದ್): ಚಿಟಗುಪ್ಪ ತಾಲ್ಲೂಕು ಕೇಂದ್ರದಲ್ಲಿ ಬುಧವಾರ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕ ಸೇರಿ ಇಲ್ಲಿಯ ವಿಧಾನ ಪರಿಷತ್ ಸದಸ್ಯರು ಗೈರಾಗಿದ್ದು, ಇಲ್ಲಿಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ವರ್ಷ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಗೈರಾಗಿದ್ದರು. ಯಾವ ಕಾರಣಕ್ಕೆ ಇವರು ತಾಲ್ಲೂಕು ಆಡಳಿತದಿಂದ ಆಯೋಜನೆ ಮಾಡುತ್ತಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ ಎಂಬುವುದು ಇಲ್ಲಿಯ ಜನರಿಗೆ ಪ್ರಶ್ನೆಯಾಗಿದೆ.

ಈ ಹಿಂದೆ ಚಿಟಗುಪ್ಪ ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಆಯೋಜನೆ ಮಾಡುತ್ತಿದ್ದ ಕಲ್ಯಾಣ ಕರ್ನಾಟಕ ಉತ್ಸವ, ಕರ್ನಾಟಕ ರಾಜ್ಯೋತ್ಸವ ಸೇರಿ ಎಲ್ಲ ಕಾರ್ಯಕ್ರಮಗಳಲ್ಲಿ ಹಿಂದಿನ ಶಾಸಕರು ತಪ್ಪದೇ ಭಾಗವಹಿಸಿದ್ದರು. ಆದರೆ, ಈಗಿನ ಶಾಸಕರು ವಿಧಾನ ಪರಿಷತ್ ಸದಸ್ಯರು ಭಾಗವಹಿಸದೆ ಇರುವುದು ನೋವಿನ ಸಂಗತಿ ಎಂದು ಹೆಸರು ಹೇಳಲು ಇಚ್ಛಿಸದ ಮುಖಂಡರೊಬ್ಬರು ತಿಳಿಸಿದರು.

ಹುಮನಾಬಾದ್ನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಿದ್ದರಿಂದ ಚಿಟಗುಪ್ಪ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಲಿಲ್ಲ. ಬರುವ ದಿನಗಳಲ್ಲಿ ಗೈರಾಗುವುದಿಲ್ಲ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ತಿಳಿಸಿದರು.

‘ಹೋರಾಟಗಾರರ ಅರಿಯಿರಿ’

ಚಿಟಗುಪ್ಪ (ಹುಮನಾಬಾದ್): ‘ಹೈದರಾಬಾದ್ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಮಹಾನ್ ವ್ಯಕ್ತಿಗಳ ಬಗ್ಗೆ ಇಂದಿನ ಯುವಕರು ತಿಳಿದುಕೊಳ್ಳಬೇಕು’ ಎಂದು ತಹಶೀಲ್ದಾರ್ ಮಂಜುನಾಥ ಪಂಚಾಳ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ಸರ್ದಾರ್ ವಲ್ಲಭಭಾಯಿ ಪಟೇಲರ ಶ್ರಮದಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ಬಂದಿದೆ’ ಎಂದರು. ‘ಭಗವಾನ್ ವಿಶ್ವಕರ್ಮರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಪುರಸಭೆ ಅಧ್ಯಕ್ಷ ದಿಲೀಪ್ ಕುಮಾರ್ ಬಗದಲ್ಕರ್ ಉಪಾಧ್ಯಕ್ಷ ನಸೀರ್ ಖಾನ್ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಪುರಸಭೆ ಮುಖ್ಯಾಧಿಕಾರಿ ಹುಸಾಮೋದ್ದಿನ್ ಬಾಬಾ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.