ಮಂಗಳವಾರ, ಅಕ್ಟೋಬರ್ 4, 2022
26 °C

‘ಹೋರಾಟಗಾರರ ತ್ಯಾಗ ಶ್ಲಾಘನೀಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ‘ಕಲ್ಯಾಣ ಕರ್ನಾಟಕ ಭಾಗದ ಜನರು ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ, ನಿಜಾಮರ ವಿರುದ್ಧ ಹೋರಾಟ ನಡೆಸಿದ್ದರು’ ಎಂದು ನಿವೃತ್ತ ಪ್ರಾಧ್ಯಾಪಕ ಚಂದ್ರಶೇಖರ ಬಿರಾದಾರ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮುಂಚೆಯೇ ನಮ್ಮ ಭಾಗದ ಬೀದರ್‌, ಉದಗೀರ್‌ನಲ್ಲಿ ಹೋರಾಟಗಾರರಾದ ಶಿವಲಿಂಗಯ್ಯ ದೇಶಮುಖ, ಲಿಂಗಪ್ಪ ಸೇರಿದಂತೆ ಇತರರು ಹೆಚ್ಚಿನ ಕರ ವಿಧಿಸಿದ್ದರಿಂದ ಹೋರಾಟ ನಡೆಸಿದ್ದರು. ನಮಗೆ ಸ್ವಾತಂತ್ರ್ಯ ಪುಕ್ಕಟೆ ದೊರೆತಿಲ್ಲ. ಅನೇಕ ಭಯಾನಕ ಪರಿಣಾಮಗಳ ಫಲದಿಂದ ದೊರೆತಿದೆ ಎಂದು ತಿಳಿಸಿದರು.

ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ,‘ಮಹಾನ್‌ ನಾಯಕರ ತ್ಯಾಗ, ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಯುವಕರ ಮೇಲಿದೆ’ ಎಂದು ಹೇಳಿದರು.

ಆಡಳಿತಾಧಿಕಾರಿ ಮೋಹನರೆಡ್ಡಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಮಹಾದೇವ ಪಟ್ನೆ, ಗಿರೀಶ ಘನವಟಕರ್‌, ರಮೇಶ ಕುಟಮಲಗೆ, ಶೀಲವಂತ, ಸಂಯೋಜಕ ಮಹೇಶ ಮಹಾರಾಜ್‌ ಇದ್ದರು. ಲಕ್ಷ್ಮಣ ಮೇತ್ರೆ ಸ್ವಾಗತಿಸಿದರು. ಬಸವರಾಜ್‌ ಪ್ರಭಾ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು