ಭಾನುವಾರ, ಅಕ್ಟೋಬರ್ 24, 2021
20 °C

ಕಲ್ಯಾಣ ಪರ್ವ: ಭಕ್ತರ ಮನೆಗೆ ಮಾತಾಜಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಲ್ಯಾಣ ಪರ್ವ ಪ್ರಚಾರಾರ್ಥವಾಗಿ ಕೂಡಲಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರು ನಗರದಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿದರು.

ಅ. 18 ರಿಂದ ಮೂರು ದಿನಗಳ ಕಾಲ ಬಸವಕಲ್ಯಾಣದಲ್ಲಿ ನಡೆಯಲಿರುವ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ನಗರದ ರಮೇಶ ಪಾಟೀಲ ಚಿಕ್ಕಪೇಟೆ ಅವರ ನಿವಾಸದಲ್ಲಿ ಕುಟುಂಬದ ಸದಸ್ಯರು ಮಾತಾಜಿ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು. ಪಾದಪೂಜೆ ಮಾಡಿ ಭಕ್ತಿ ಸಮರ್ಪಿಸಿದರು.

ಜ್ಯೋತಿ ಆರ್. ಪಾಟೀಲ, ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಘಟಕದ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.