ಕಮಲನಗರ: ತಾಲ್ಲೂಕಿನ ಬಳತ(ಬಿ) ಹೊರವಲಯದ ಮಾಂಜ್ರಾ ನದಿಯಲ್ಲಿ ಶನಿವಾರ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಶೋಧ ಕಾರ್ಯವು ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೂ ನಡೆಯಿತು. ಆದರೆ ಇಲ್ಲಿಯವರೆಗೆ ಯುವಕನ ದೇಹ ಪತ್ತೆಯಾಗಿಲ್ಲ.

ಬಳತ(ಬಿ) ಗ್ರಾಮದ ಯುವರಾಜ ಅನಿಲ ಚಿದ್ರೆ(28) ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಯುವಕನ ಹುಡುಕಾಟಕ್ಕಾಗಿ ಕಲಬುರಗಿಯಿಂದ ಎಸ್ಡಿಆರ್ಎಫ್ ತಂಡ ಬಂದಿದ್ದು, ಎರಡನೇ ದಿನವೂ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಕಾರ್ಯಾಚರಣೆ ನಡೆಸಿದರೂ ಯುವಕನ ಸುಳಿವು ಸಿಕ್ಕಿಲ್ಲ.

ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ, ಈಜು ತಜ್ಞರು ಹಾಗೂ ಗ್ರಾಮಸ್ಥರು ಕೂಡ ಬೋಟ್ ಮುಖಾಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ. ನೀರಿನಲ್ಲಿ ಮುಳುಗಿದ ಯುವಕನ ಶವ ಪತ್ತೆಗಾಗಿ ಎಸ್ಡಿಆರ್ಎಫ್ ತಂಡ ಭಾನುವಾರ ಸಂಜೆವರೆಗೆ ಶೋಧ ಕಾರ್ಯಾಚರಣೆ ನಡೆಸಿತು. ಯುವಕನ ದೇಹ ಪತ್ತೆಯಾಗದ ಹಿನ್ನೆಲೆ ಸ್ಥಗಿತಗೊಳಿಸಿ ಸೋಮವಾರ ಬೆಳಿಗ್ಗೆ ಮತ್ತೆ ಶೋಧ ಕಾರ್ಯ ಮುಂದುವರಿಸಲಾಗುವುದು ಎಂದು ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸಹಾಯಕ ಆಯುಕ್ತ ಮಹಮ್ಮದ ಶಕೀಲ್, ಡಿವೈಎಸ್ಪಿ ಶಿವಾನಂದ ಪವಾಡಶೇಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ, ಸಿಪಿಐ ಶ್ರೀಕಾಂತ ಅಲ್ಲಾಪುರ, ಠಾಣಾಕುಶನೂರ ಪಿಎಸ್ಐ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಠಿಕಾಣಿ ಹೂಡಿ ಶೋಧ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-33-35370990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.