ಕಮಲನಗರ: ‘ಬೇಸಿಗೆಯ ತೀವ್ರತೆ ಹಿನ್ನಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು’ ಎಂದು ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡಿ ತುರ್ತು ಪರಿಹಾರ ಕೈಗೊಳ್ಳಬೇಕು. ಸಮಸ್ಯೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್, ಖಾಸಗಿ ತೆರೆದ ಬಾವಿ ಹಾಗೂ ಕೊಳವೆ ಬಾವಿ ಮೂಲಕ ನೀರು ಪೂರೈಸಬೇಕು. ಸಮರ್ಪಕವಾಗಿ ನೀರು ಪೂರೈಕೆ ಆಗುವಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು’ ಎಂದರು.

ತಾಪಂ ಇಒ ಹಣಮಂತರಾಯ ಕೌಟಗೆ ಮಾತನಾಡಿ, ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹಮ್ಮಿಕೊಂಡಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ದೂರು ಬಂದರೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಹಾಗೂ ಗ್ರಾಪಂ. ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೀರಿನ ಸಮಸ್ಯೆ ಬಗೆಹರಿಸಬೇಕು’ ಎಂದರು.

ತಾಲ್ಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಮಾರುತಿ ರಾಠೋಡ, ತಾಪಂ ಸಹಾಯಕ ಅಧಿಕಾರಿ ಸೋಮಶೇಖರ, ಪಿಡಿಒಗಳಾದ ಮಲ್ಲೇಶ, ಸಂಧ್ಯಾರಾಣಿ, ದತ್ತಾತ್ರಿ, ರಂಗಾಚಾರಿ, ವೆಂಕಟೇಶ, ಶೇಷಪ್ಪ, ಬಸಪ್ಪ, ರಾಮದಾಸ, ಪ್ರಶಾಂತ, ಮನೋಹರ, ಸಿಬ್ಬಂಧಿಗಳಾದ ಸಾಗರ, ಅಂಕುಶ, ಮಹೇಶ ಸೇರಿದಂತೆ ಅನೇಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-33-163399422

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.