ಕಮಲನಗರ: ಪಟ್ಟಣದ ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ, ಗುರಪ್ಪಾ ಟೊಣ್ಣೆ ಪ್ರಾಥಮಿಕ ಶಾಲೆ ಹಾಗೂ ಗುರುಕಾರುಣ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸೋಮವಾರ ಶಾಲೆ ಪ್ರಾರಂಭೋತ್ಸವದ ನಿಮಿತ್ತ ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ ಸಿಹಿ ತಿನಿಸಿ ಸ್ವಾಗತಿಸಲಾಯಿತು.

2026-27ನೇ ಶೈಕ್ಷಣಿಕ ವರ್ಷಕ್ಕೆ ಶಾಲಾ ಆರಂಭೋತ್ಸವಕ್ಕೆ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ ತುಂಬೆಲ್ಲ ಶಾಲಾ ಪ್ರಾರಂಭೊತ್ಸವದ ಕುರಿತು ಜಾಗೃತಿ ಜಾಥಾ ಮಾಡಲಾಯಿತು.

ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.

ಪಿಎಸ್ಐ ಆಶಾ ರಾಠೋಡ ಮತ್ತು ನಿವೃತ್ತ ಪ್ರಾಚಾರ್ಯ ಎಸ್.ಎಸ್ ಮೈನಾಳೆ ಬಸವ ಪೂಜೆ ನೆರವೇರಿಸಿದರು.

ಶಾಲೆಯ ಆಡಳಿತಾಧಿಕಾರಿ ಚನ್ನಬಸವ ಘಾಳೆ, ನಿವೃತ ಪಿಎಸ್ಐ ರಮೇಶ ಟೊಕರೆ, ನಿವೃತ ಶಿಕ್ಷಕ ಶೇಷರಾವ ಬಿರಾದಾರ, ಪಾಲಕರ ಪ್ರತಿನಿಧಿ ಶರಣಪ್ಪಾ ನಿಡೋದೆ, ಗುರುಕಾರುಣ್ಯ ಪಬ್ಲಿಕ ಸ್ಕೂಲನ್ ಪ್ರಾಂಶುಪಾಲರಾದ ಪ್ರೀಯಂಕಾ ಪವಾರ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

ಹಾವಗಿರಾವ ಮಠಪತಿ ಹಾಗೂ ವಿವೇಕಾನಂದ ಬಿರಾದಾರ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-1639915948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.