ಕನಕಗಿರಿ: ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರದ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಒತ್ತಾಯಿಸಿ ಹಡಪದ ಅಪ್ಪಣ್ಣ ಸಮಾಜದ ನಗರ ಘಟಕದ ವತಿಯಿಂದ ಇಲ್ಲಿನ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಅನಿತಾ ಇಂಡಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ನಗರ ಘಟಕದ ಅಧ್ಯಕ್ಷ ಬಸವರಾಜ ಹಡಪದ ಮಾತನಾಡಿ, ‘ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದು ಇತಿಹಾಸದಿಂದ ತಿಳಿದು ಬಂದಿದೆ. ಬಸವಣ್ಣನವರ ಆಪ್ತಕಾರ್ಯದರ್ಶಿ ಆಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿ ಇಲ್ಲಿದೆ. ಆದರೆ ಅವರ ಅರಿವಿನ ಗವಿಯನ್ನು ಬಸವೇಶ್ವರ ದೇವಸ್ಥಾನದ ಸಮಿತಿಯ ಹಸ್ತಕ್ಷೇಪ ಮಾಡಿ ಬೇರೆ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಖಂಡನೀಯ’ ಎಂದು ತಿಳಿಸಿದರು.

‘ಶಿವಶರಣ ಹಡಪದ ಅಪ್ಪಣ್ಣ ಅವರ ಸಮುದಾಯದ ಭಾವನೆಗಳನ್ನು ಕೆರಳಿಸುವಂತೆ ಸಮಿತಿಯವರು ವರ್ತಿಸಿರುವುದು ಸರಿಯಲ್ಲ. ಹಡಪದ ಅಪ್ಪಣ್ಣ ಅವರ ಅರಿವಿನ ಗವಿಗೆ ಅವಮಾನ ಎಸಗುವ ಮೂಲಕ ಐತಿಹಾಸಿಕ ಮೌಲ್ಯ ಕುಗ್ಗುವಂತೆ ಮಾಡಿದ್ದಾರೆ. ಹಡಪದ ಅಪ್ಪಣ್ಣ ಅವರು, ಶರಣರ ಇತಿಹಾಸ ಹಾಗೂ ಅರಿವಿನ ಗವಿಯನ್ನು ಕಳೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಈ ಘಟನೆ ನಮ್ಮ ಭಾವನೆಗಳಿಗೆ ಗಂಭೀರ ಧಕ್ಕೆ ಉಂಟು ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಈ ಕುರಿತು ಸಮಾಜದ ಮುಖಂಡರು, ಭಕ್ತರು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪ್ರತಿಭಟನೆ ನಡೆಸಿ ಗಮನ ಸೆಳೆದರೂ ನ್ಯಾಯ ಒದಗಿಸಿಲ್ಲ’ ಎಂದರು.

ಸಮಾಜದ ಪ್ರಧಾನ ಕಾರ್ಯದರ್ಶಿ ಸತೀಶ ಹಡಪದ ಮಾತನಾಡಿ, ‘ಕೃತ್ಯದಲ್ಲಿ ಭಾಗಿಯಾದ ಸಮಿತಿ ಪದಾಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು. ಹಡಪದ ಅಪ್ಪಣ್ಣರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಬೇಕು. ಸ್ಥಳವನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಸಮರ್ಪಕವಾಗಿ ಅಭಿವೃದ್ಧಿಪಡಿಸಬೇಕು. ಬಸವಣ್ಣನವರು ಎಲ್ಲಿರುತ್ತಾರೋ ಅಲ್ಲಿ ಹಡಪದ ಅಪ್ಪಣ್ಣ ಇರಬೇಕು’ ಎಂದು ಮನವಿ ಮಾಡಿದರು.

ಪ.ಪಂ ನಾಮನಿರ್ದೇಶತ ಸದಸ್ಯ ಹನುಮೇಶ ಹಡಪದ, ಹಡಪದ ಅಪ್ಪಣ್ಣ ಸಮಾಜದ ನಗರ ಘಟಕದ ಖಜಾಂಚಿ ಚನ್ನಬಸವ ಹಡಪದ, ಪ್ರಮುಖರಾದ ಲಿಂಗಪ್ಪ ಹಡಪದ, ಪಂಪಾಪತಿ, ಮಲ್ಲಿಕಾರ್ಜುನ, ಮಲ್ಲಪ್ಪ ಹಡಪದ, ಕಂಠಿರಂಗ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-35-1329246380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.