ಬೀದರ್: ‘ಕನ್ನಡ ಹೋರಾಟಗಾರರ ಮೇಲಿನ ಪ್ರಕರಣ ಸರ್ಕಾರ ಹಿಂಪಡೆಯಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಕರವೇ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಕನ್ನಡ ದೀಕ್ಷೆ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಕರಣಗಳನ್ನು ಹಿಂದಕ್ಕೆ ತೆಗೆದುಕೊಳ್ಳುವಲ್ಲಿ ಈಗಾಗಲೇ ವಿಳಂಬ ಆಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ನಡೆಯಲಿದ್ದಾರೆ’ ಎಂದರು.

ಕರವೇ ರಾಜ್ಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ‘ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲು ಕಲ್ಪಿಸುವ ಸರೋಜಿನಿ ಮಹಿಷಿ ವರದಿ ಇನ್ನೂ ಜಾರಿಯಾಗಿಲ್ಲ. ವೇದಿಕೆ ಹೋರಾಟದ ಪರಿಣಾಮ ವರದಿ ಜಾರಿಗೆ ಮುಂದಾಗಿದ್ದ ಸರ್ಕಾರ ಕೆಲ ಐಟಿ ಕಂಪನಿಗಳ ವಿರೋಧದಿಂದ ಹಿಂದಕ್ಕೆ ಸುರಿಯುತ್ತಿರುವುದು ಸರಿಯಲ್ಲ. ಕನ್ನಡಪರ ಹೋರಾಟಗಾರರ ಮೇಲೆ ಪ್ರಕರಣಗಳು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಈಡೇರಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕರ್ನಾಟಕದಲ್ಲಿ ನಾಮಫಲಕಗಳಲ್ಲಿ ಶೇ 60 ರಷ್ಟು ಭಾಗ ಕನ್ನಡ ಬಳಸಬೇಕೆಂಬ ಕಾಯ್ದೆ ರಚನೆಯಾಗಲು ಕಾರಣವಾದದ್ದು ವೇದಿಕೆಯೇ ವಿನಾ ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಸರ್ಕಾರಗಳು ಅಲ್ಲ. ಇದಕ್ಕಾಗಿ ನಡೆಸಿದ ಹೋರಾಟದ ಕಾರಣ ನಾನು 16 ದಿನ ಜೈಲು ವಾಸ ಅನುಭವಿಸಿದೆ’ ಎಂದು ಸ್ಮರಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಮಾತನಾಡಿ, ‘ನವೆಂಬರ್ 20ರ ನಂತರ ಜಿಲ್ಲೆಯಲ್ಲಿ ನಿಯಮಾನುಸಾರ ಶೇ 60ರಷ್ಟು ಭಾಗದಲ್ಲಿ ಕನ್ನಡ ಬಳಸದ ಅನ್ಯ ಭಾಷೆ ನಾಮಫಲಕಗಳನ್ನು ಪುಡಿಗೊಳಿಸಲಾಗುವುದು. ಈ ಬಗ್ಗೆ ಈಗಾಗಲೇ ವೇದಿಕೆಯ ಕಾರ್ಯಕರ್ತರೊಂದಿಗೆ ಚರ್ಚೆ ಮಾಡಲಾಗಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜಿಲ್ಲೆಯಲ್ಲಿ ನಾಮಫಲಕ ವಿಷಯದಲ್ಲಿ ಆಡಳಿತ ನಿಷ್ಕಾಳಜಿ ತೋರುತ್ತಿದೆ. ವೇದಿಕೆ ಕನ್ನಡ ರಕ್ಷಣೆಗೆ ಹೋರಾಟ ನಡೆಸಲಿದೆ’ ಎಂದು ಹೇಳಿದರು.

‘ಕನ್ನಡ ನಾಮಫಲಕಕ್ಕಾಗಿ ಟಿ.ಎ. ನಾರಾಯಣಗೌಡರು ಸೆರೆವಾಸ ಅನುಭವಿಸಿದ್ದನ್ನು ಕನ್ನಡಿಗರು ಮರೆಯಲು ಸಾಧ್ಯವಿಲ್ಲ. ಮುಂದಿನ ವರ್ಷದ ನವೆಂಬರ್ ಒಳಗೆ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ವೇದಿಕೆಯ ಗ್ರಾಮ ಘಟಕ ರಚಿಸಿ, ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಬೀದರ್ನಲ್ಲಿ ಗಡಿ ಕನ್ನಡಿಗರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ಏಕತಾ ಫೌಂಡೇಷನ್ ಅಧ್ಯಕ್ಷ ರವೀಂದ್ರ ಸ್ವಾಮಿ, ರಾಜ್ಯ ಸಚಿನ್ ಗಾಣಗೇರ, ವೀರಭದ್ರಪ್ಪ, ವಿನೋದ, ಸಹನಾ ಶೇಖರ, ಖಾದರ್ ಪಾಷಾ, ಉಪಾಧ್ಯಕ್ಷ ಸೋಮಶೇಖರ ಸಜ್ಜನ, ವಿನಾಯಕ ರೆಡ್ಡಿ, ವೀರಶೆಟ್ಟಿ ಗೌಸಪುರ, ಔರಾದ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ಹೇಡೆ, ಕಮಲನಗರ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಸ್ವಾಮಿ, ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಂಡೆಪ್ಪ ಕರಸಣ್ಣ, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ವೀರೇಶ ರೆಡ್ಡಿ ಬೋತಗಿಕರ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಗಣೇಶ ಸತಾಣೆ, ಪ್ರಮುಖರಾದ ಮಲ್ಲಿಕಾರ್ಜುನ ಸಿಕೇನಪುರೆ, ಶಿವರುದ್ರ ತೀರ್ಥ, ಮಹೇಶ ಕಾಪಸೆ, ತುಕಾರಾಮ ಜೈರಾಮ್, ವಿಶ್ವನಾಥ ಗೌಡ ಸೇರಿದಂತೆ ಇತರರು ಹಾಜರಿದ್ದರು.

ಕನ್ನಡ ದೀಕ್ಷೆ ಪಡೆದ ಜಿಲ್ಲೆಯ ಯುವಕರು

ಕರವೇ ವತಿಯಿಂದ ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯ ಯುವಕರು ಅಪಾರ ಸಂಖ್ಯೆಯಲ್ಲಿ ಕನ್ನಡ ದೀಕ್ಷೆ ಪಡೆದರು. ವೇದಿಕೆಯ ರಾಜ್ಯ ಅಧ್ಯಕ್ಷ ಟಿ.ಎ. ನಾರಾಯಣಗೌಡರು ಪ್ರತಿಜ್ಞಾ ವಿಧಿ ಬೋಧಿಸಿದರು. ಕನ್ನಡ ತಾಯಿ ಭುವನೇಶ್ವರಿಗೆ ಜಯವಾಗಲಿ ಎಂಬ ಘೋಷಣೆ ಮೊಳಗಿದವು. ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ವಿವಿಧ ಹೋರಾಟಗಳ ಕಿರುಚಿತ್ರ ಪ್ರದರ್ಶಿಸಲಾಯಿತು. ಐದು ನಿಮಿಷದ ಕಿರುಚಿತ್ರ ವೇದಿಕೆಯು ಕನ್ನಡ ನಾಡು ನುಡಿಗಾಗಿ ನಡೆಸಿದ ಹೋರಾಟಗಳ ಮೇಲೆ ಬೆಳಕು ಚೆಲ್ಲಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.