ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭವನ: ಬಾಕಿ ಅನುದಾನ ಬಿಡುಗಡೆಗೆ ಒತ್ತಾಯ

Last Updated 29 ಜುಲೈ 2021, 15:10 IST
ಅಕ್ಷರ ಗಾತ್ರ

ಬೀದರ್: ಕನ್ನಡ ಭವನದ ₹ 4 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಬಲ್ಲೂರ ಅವರು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.

ಭವನದ ಮೊದಲ ಹಂತದ ಕಾಮಗಾರಿ ತೀವ್ರಗತಿಯಲ್ಲಿ ಸಾಗಿದ್ದು, ಕೊನೆಯ ಹಂತದಲ್ಲಿದೆ. ಈಗಾಗಲೇ ಜಿಲ್ಲಾ ಆಡಳಿತ ಸಂಬಂಧಪಟ್ಟ ಇಲಾಖೆಗೆ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಅವರ ಆಸಕ್ತಿ ಫಲವಾಗಿ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಕನ್ನಡ ಭವನವು ಸಭಾ ಭವನ, ಬಯಲು ರಂಗ ಮಂದಿರ, ಗ್ರಂಥಾಲಯ, ಕಲಾ ಗ್ಯಾಲರಿ, ರಂಗ ತಾಲೀಮು ಒಳಗೊಳ್ಳಲಿದೆ. ಮಾದರಿ ಭವನ ಆಗಲಿದೆ ಎಂದು ಹೇಳಿದರು.

ಭವನದಿಂದ ಸಾಂಸ್ಕೃತಿಕ, ಸಾಹಿತ್ತಿಕ ಹಾಗೂ ಕನ್ನಡಪರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT