ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭವನ ಕಾಮಗಾರಿ ಶೀಘ್ರ ಆರಂಭ

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಭರವಸೆ
Last Updated 20 ಅಕ್ಟೋಬರ್ 2020, 15:44 IST
ಅಕ್ಷರ ಗಾತ್ರ

ಬೀದರ್: ನಗರದಲ್ಲಿ ಕನ್ನಡ ಭವನ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಭರವಸೆ ನೀಡಿದರು.

ನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಚಿವ ಚವಾಣ್ ಅವರ ಪ್ರಯತ್ನದಿಂದಾಗಿ ಕನ್ನಡ ಭವನ ನಿರ್ಮಾಣಕ್ಕೆ ₹ 2 ಕೋಟಿ ಮಂಜೂರಾಗಿದೆ. ಸರ್ಕಾರ, ಮೊದಲ ಕಂತಿನ ಹಣ ಬಿಡುಗಡೆಗೆ ಆದೇಶವನ್ನೂ ಮಾಡಿರುವುದು ಕನ್ನಡಾಭಿಮಾನಿಗಳಿಗೆ ಸಂತಸ ಉಂಟು ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಾಣವಾಗಬೇಕು ಎನ್ನುವುದು ಕನ್ನಡಾಭಿಮಾನಿಗಳ ಬಹು ದಿನಗಳ ಬೇಡಿಕೆಯಾಗಿದೆ. ಅನುದಾನಕ್ಕಾಗಿ ಪ್ರತಿ ವರ್ಷ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸುತ್ತಲೇ ಬರಲಾಗಿತ್ತು. ಎಲ್ಲ ಸಚಿವರು ಕೇವಲ ಆಶ್ವಾಸನೆ ನೀಡಿದ್ದರು. ಆದರೆ, ಚವಾಣ್ ಅವರ ಆಸಕ್ತಿಯಿಂದಾಗಿ ಅನುದಾನ ಮಂಜೂರಾಗಿದೆ. ಜಿಲ್ಲೆಯಲ್ಲಿ ಕನ್ನಡ ಪರ ಚಟುವಟಿಕೆಗಳು ಕೂಡ ಚುರುಕುಗೊಂಡಿವೆ ಎಂದು ನುಡಿದರು.

ನಗರದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಇದ್ದ ಎಲ್ಲ ತೊಡಕುಗಳು ನಿವಾರಣೆಯಾಗಿವೆ. ಕಟ್ಟಡ ನಿರ್ಮಾಣ ಕಾರ್ಯ ಕೂಡಲೇ ಶುರು ಮಾಡಬೇಕು. ಕಾಮಗಾರಿ ಗುಣಮಟ್ಟದಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪರಿಷತ್ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಡಾ. ಬಸವರಾಜ ಬಲ್ಲೂರ, ಗಡಿ ಪ್ರತಿನಿಧಿ ಶಿವಕುಮಾರ ಕಟ್ಟೆ, ಸಂಚಾಲಕ ಶಿವಶಂಕರ ಟೋಕರೆ, ಜಗನ್ನಾಥ ಕಮಲಾಪುರೆ, ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ಸಚಿನ್ ಮಠಪತಿ, ಬಸವಕಲ್ಯಾಣ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ರುದ್ರಮಣಿ ಮಠಪತಿ, ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲಕುಮಾರ ಸಿಂಧೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT