ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ನೀಡಿ: ಸಮಿತಿ ಪದಾಧಿಕಾರಿಗಳ ಒತ್ತಾಯ

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಪದಾಧಿಕಾರಿಗಳ ಒತ್ತಾಯ
Last Updated 8 ಸೆಪ್ಟೆಂಬರ್ 2022, 7:24 IST
ಅಕ್ಷರ ಗಾತ್ರ

ಕಮಲನಗರ: ‘ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಒತ್ತಾಯಿಸಿದೆ.

ಈ ಕುರಿತು ಕಸಾಪ ತಾಲ್ಲೂಕು ಸಮಿತಿ ಅಧ್ಯಕ್ಷ ಪ್ರಶಾಂತ ಮಠಪತಿ ನೇತೃತ್ವದ ನಿಯೋಗ ಬುಧವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರಿಗೆ ಮನವಿ ಸಲ್ಲಿಸಲಾಯಿತು.

ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದು ಕನ್ನಡಾಭಿಮಾನಿಗಳ ದಶಕಗಳ ಕನಸು. ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಬೀದರ್ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ನಿವೇಶನ ಪಡೆಯಲಾಗಿದೆ. ಕೆಲವು ಕಡೆ ಕನ್ನಡ ಭವನ ನಿರ್ಮಾಣವಾಗಿವೆ. ಇನ್ನೂ ಕೆಲವು ಕಡೆ ನಿರ್ಮಾಣ ಹಂತದಲ್ಲಿವೆ. ಆದರೆ ಇಲ್ಲಿಯವರೆಗೆ ಕಮಲನಗರದಲ್ಲಿ ನಿವೇಶನವೂ ದೊರಕದಿರುವುದು ಕನ್ನಡಾಭಿಮಾನಿಗಳಿಗೆ ನೋವುಂಟು ಮಾಡಿದೆ ಎಂದು ಅಳಲು ತೋಡಿಕೊಂಡರು.

ಕ್ಷೇತ್ರದ ಶಾಸಕರು ಹಾಗೂ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಕನ್ನಡ ಭವನ ನಿರ್ಮಾಣಕ್ಕೆ ನಿವೇಶನ ಒದಗಿಸಿದರೆ ಭವನ ನಿರ್ಮಾಣಕ್ಕೆ ₹25 ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮಿತಿ ಅಧ್ಯಕ್ಷ ಪ್ರಶಾಂತ ಮಠಪತಿ, ಗೌರವಾಧ್ಯಕ್ಷ ಎಸ್.ಎನ್.ಶಿವಣಕರ, ಸಾಹಿತಿ ಜಗನ್ನಾಥ ಚಿಮ್ಮಾ, ಡಾ.ಎಸ್.ಎಸ್.ಮೈನಾಳೆ, ಲಿಂಗಾನಂದ ಮಹಾಜನ, ಯಶವಂತ ಬಿರಾದಾರ, ಬಸವರಾಜ ಪಾಟೀಲ, ಮಹಾದೇವ ಮಡಿವಾಳ, ಬಂಟಿ ರಾಂಪುರೆ, ಧನರಾಜ ಭವರಾ, ಪ್ರಭು ಕಳಸೆ, ಶಿವರಾಜ ಜಲಸಿಂಗೆ, ಮಡಿವಾಳಪ್ಪ ಮಹಾಜನ, ಸಾಯಿನಾಥ ಕಾಂಬಳೆ, ಸಂತೋಷ ಸುಲಾಕೆ, ಮನೋಜ ಹಿರೇಮಠ, ವಿಶಾಲ ಮಹಾಜನ, ಅಜರೋದ್ದಿನ್ ಬಾಗವಾನ್, ಉಮಾಕಾಂತ ಮಹಾಜನ, ನಾಗೇಶ ಸಂಗಮೆ, ಶಿವರಾಜ ಪಾಟೀಲ ಹಾಗೂ ಸುಭಾಷ ಬಿರಾದಾರ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT