ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಭಾಷೆ, ಸಂಸ್ಕೃತಿಯ ಉಳುವಿಗೆ ಶ್ರಮಿಸಿ’

Last Updated 1 ನವೆಂಬರ್ 2019, 16:04 IST
ಅಕ್ಷರ ಗಾತ್ರ

ಹುಮನಾಬಾದ್: ‘ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳುವಿಗಾಗಿ ಕನ್ನಡ ಪರ ಸಂಘಟನೆಗಳು, ಅಧಿಕಾರಿಗಳು ಹಾಗೂ ಯುವಕರು ಶ್ರಮಿಸಬೇಕು’ ಎಂದು ಶಾಸಕ ರಾಜಶೇಖರ್ ಪಾಟೀಲ ಹೇಳಿದರು.

ಪಟ್ಟಣದ ತಹಶೀಲ್‌ ಕಚೇರಿ ಆವರಣದಲ್ಲಿ ತಾಲ್ಲೂಕು ಅಡಳಿತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಭಾಷೆ ಪ್ರಾಚೀನ ಭಾಷೆಯಾಗಿದೆ. ಪ್ರತಿಯೊಬ್ಬರು ಅಡಳಿತದಲ್ಲಿ ಕನ್ನಡ ಭಾಷೆಗೆ ಮೂದಲ ಆದ್ಯತೆ ನೀಡಬೇಕು. ಕನ್ನಡ ಪರ ಸಂಘಟನೆಗಳು, ಸಾರ್ವಜನಿಕರ ಹಾಗೂ ಜನಪ್ರತಿನಿಧಿಗಳ ಶ್ರಮದಿಂದ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ ಎಂದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸವೇಶ್ವರ ವೃತ್ತ, ವೀರಭದ್ರೇಶ್ವರ ದೇವಸ್ಥಾನ, ಶಿವಪುರ ಬಡಾವಣೆಯಿಂದ ಮುಖ್ಯರಸ್ತೆವರೆಗೆ ₹1.40 ಕೋಟಿ ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣ ಮಾಡಲಾಗಿದೆ. ಸಾರ್ವಜನಿಕರು ಸಾರ್ವಜನಿಕರು ಸರ್ಕಾರ ಆಸ್ತಿಗಳನ್ನು ಕಾಪಾಡಿಕೊಂಡು ಹೋಗಬೇಕು ಎಂದರು.

ತಾಲ್ಲೂಕು ಅಡಳಿತದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದು ನಾಣ್ಯದ ಎರಡು ಮುಖಗಳಿದಂತೆ. ಇಬ್ಬರು ಸಮಾನವಾಗಿ ನಡೆದರೆ ಮಾತ್ರ ಕ್ಷೇತ್ರದ ಸಮಗ್ರ ಅಭಿವೃದ್ದಿಯಾಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಸಮಸ್ಯಗೆ ಮತ್ತು ಅಭಿವೃದ್ದಿಗಾಗಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ ಮಾತನಾಡಿ,‘ಪ್ರತಿಯೊಬ್ಬರು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಪರಂಪರೆ ಸಂರಕ್ಷಣೆಗಾಗಿ ಪ್ರಾಮಾಣಿಕತೆಯಿಂದ ಶ್ರಮಿಸಬೇಕು ಎಂದರು.

ಬೀದರ್ ಕರ್ನಾಟಕ ಪದವಿ ಮಹಾವಿದ್ಯಾಲಯ ಉಪನ್ಯಾಸಕ ಡಾ. ಬಸವರಾಜ ಬಲ್ಲೂರು ವಿಶೇಷ ಉಪನ್ಯಾಸ ನೀಡಿದರು. ತಹಶೀಲ್ದಾರ್ ನಾಗಯ್ಯ ಹಿರೇಮಠ ಪ್ರಾಸ್ತವಿಕ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಉಪಾಧ್ಯಕ್ಷೆ ಸುಗಂಧಾ ಅಣ್ಣೆಪ್ಪ, ಸದಸ್ಯ ಶ್ರೀಮಂತ ಪಾಟೀಲ, ಎಪಿಎಂಸಿ ಅಧ್ಯಕ್ಷ ಭದ್ರೇಶ ಪಾಟೀಲ, ಪುರಸಭೆ ಸದಸ್ಯ ವಿಜಯಕುಮಾರ ಭಾಸಪಳ್ಳಿ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಕಸಾಪ ಅಧ್ಯಕ್ಷ ಸಚಿನ್ ಮಠಪತಿ, ಡಿವೈಎಸ್‍ಪಿ ಮಹೇಶ್ವರಪ್ಪ, ಇಒ ವೈಜಿನಾಥ ಫುಲೆ, ಸಿಪಿಐ ಜೆ.ಎಸ್ ನ್ಯಾಮಗೌಡ, ಬಿಇಓ ಶಿವರಾಚಪ್ಪ ವಾಲಿ, ಎಡಿಎ ಮಲ್ಲಿಕಾರ್ಜುನ, ಪಶೂಸಂಗೋಪನ ಸಹಾಯಕ ನಿರ್ದೇಶಕ ಡಾ.ಗೋವಿಂದ, ಎಇಇ ರಾಚಪ್ಪ ಪಾಟೀಲ, ಬಿಸಿಯೂಟ ಸಹಾಯಕ ನಿರ್ದೇಶಕ ಓಂಕಾರ ರೋಗನ್, ಬಿಸಿಎಂ ಅಧಿಕಾರಿ ವಿಠಲ ಸೇಡಂ, ಎಇಇ ಪ್ರಕಾಶ ಹಿರೇಮಠ ಹಾಗೂ ನಾರಾಯಣ ಅಂಬುಲಗೆ ಇದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT