ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ರಾಜ್ಯೋತ್ಸವ, ಕೃತಿ ಬಿಡುಗಡೆ ಇಂದು

Last Updated 28 ನವೆಂಬರ್ 2022, 14:22 IST
ಅಕ್ಷರ ಗಾತ್ರ

ಬೀದರ್: ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕವು ಮಂಗಳವಾರ (ಜ.29) ಬೆಳಿಗ್ಗೆ 10.30ಕ್ಕೆ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ 67ನೇ ಕನ್ನಡ ರಾಜ್ಯೋತ್ಸವ, ಕ್ರಾಂತಿಯ ಬೆಳಕು ಕೃತಿ ಬಿಡುಗಡೆ ಹಾಗೂ ಸಾಂಸ್ಕøತಿಕ ಸಾಹಿತ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ.

ಕೌಠಾದ ಬೆಲ್ದಾಳ ಸಿದ್ಧರಾಮ ಶರಣರು, ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಮಹೇಶ್ವರ ತಾತ ಸಾನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸುವರು.

ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಗೌರವಾಧ್ಯಕ್ಷ ಶಶಿಕುಮಾರ ಪೊಲೀಸ್ ಪಾಟೀಲ ಅಧ್ಯಕ್ಷತೆ ವಹಿಸುವರು. ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಗಣ್ಯರು ಪಾಲ್ಗೊಳ್ಳುವರು ಎಂದು ಸಂಸ್ಥೆಯ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

* * *

ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಆರ್ಜಿ ಆಹ್ವಾನ

ಬೀದರ್ಳ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದವು ಎಂ.ಎ. ಕನ್ನಡ ಮತ್ತು ಜಾನಪದ,ಎಂ.ಎ. ಮಹಿಳಾ ಅಧ್ಯಯನ,ಪಾರಂಪರಿಕ ಹೈನುಗಾರಿಕೆ ಪಿ.ಜಿ.ಡಿಪ್ಲೊಮಾ, ಸರ್ಟಿಪಿಕೆಟ್ ಕೋರ್ಸಗಳಾದ ಜನಪದ ಗೀತ ಸಂಪ್ರದಾಯ, ಜನಪದ ಕುಣಿತ, ಬಿದರಿ ಕಲೆ,ಸಮರ ಕಲೆ,ಜನಪದ ನೃತ್ಯ, ಕಸೂತಿ ಕಲೆ ತರಗತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಎ. ಪಿಜಿ ಹಾಗೂ ಪಿಜಿ ಡಿಪ್ಲೊಮಾ ಕೋರ್ಸಿಗೆ ಪ್ರವೇಶ ಬಯಸುವವರು ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಯುಜಿ ಡಿಪ್ಲೊಮಾ ಪ್ರವೇಶಕ್ಕೆ ಪಿಯುಸಿ ಪಾಸಾಗಿರಬೇಕು. ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶಕ್ಕೆ ಹತ್ತನೆ ತರಗತಿ ತೇರ್ಗಡೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.janapadauniversity.ac.in ಅಥವಾ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂzದಿಂದ ಪಡೆದುಕೊಳ್ಳಬಹುದು. ಇಲ್ಲಿ ಪ್ರವೇಶ ಪಡೆದುಕೊಳ್ಳುವ ವಿದ್ಯಾರ್ಥಿಗಳು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನ/ಬಸ್‍ಪಾಸ್, ವಸತಿನಿಲಯ ಹಾಗೂ ಇತರೆ ಸೌಲಭ್ಯಗಳು ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ ಎಂದು ಸಂಯೋಜನಾ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT