ಶುಕ್ರವಾರ, ಡಿಸೆಂಬರ್ 2, 2022
19 °C

ಬೀದರ್: 5ರಂದು ಕನ್ನಡ ರಾಜ್ಯೋತ್ಸವ, ಅಭಿನಂದನಾ ಸಮಾರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನ. 5 ರಂದು ಸಂಜೆ 4ಕ್ಕೆ ಕನ್ನಡ ರಾಜ್ಯೋತ್ಸವ, ರಾಜ್ಯಮಟ್ಟದ ಅಮೋಘ ವರ್ಷ ನೃಪತುಂಗ ಪ್ರಶಸ್ತಿ ಪುರಸ್ಕೃತ ದಿಲೀಪಕುಮಾರ ಡೊಂಗರಗೆ ಅವರಿಗೆ ಅಭಿನಂದನೆ ಹಾಗೂ ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಸಮಾರಂಭ ನಡೆಯಲಿದೆ.

ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟಿಸುವರು. ಬಸವಕಲ್ಯಾಣದ ಬಸವ ಮಹಾಮನೆಯ ಅಧ್ಯಕ್ಷ ಡಾ. ಬೆಲ್ದಾಳ ಸಿದ್ದರಾಮ ಶರಣರು ದಿವ್ಯ ಸಾನಿಧ್ಯ ವಹಿಸುವರು.

ಸಾರ್ವಜನಿಕ ಗ್ರಂಥಾಲಯದ ನಿರ್ದೇಶಕ ಸತೀಶಕುಮಾರ ಹೊಸಮನಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ ಶೆಟಕಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಶಿವಶರಣಪ್ಪ ಹುಗ್ಗೆಪಾಟೀಲ, ಡಿ. ಝಾಕೀರ್ ಹುಸೇನ್, ಸುರೇಶ ಚಾಳೆ, ಸಂಗಶೆಟ್ಟಿ ಹಲಬರ್ಗೆ, ವೈಜಿನಾಥ ಸಾಗರ, ಶ್ರೀನಿವಾಸ ರೆಡ್ಡಿ ಮುದ್ನಾಳ್, ವಿಷ್ಣುಕಾಂತ ಠಾಕೂರ್, ಪ್ರಶಾಂತ ರಾಗಾ, ಲಿಂಗರಾಜ ಭಾಲ್ಕೆ, ಗೋವಿಂದ ಪೂಜಾರಿ, ಡಾ. ಶಿವಾನಂದ ಚಿಕ್ಕಮಠ, ಕಲಾಲ್ ದೇವಿಪ್ರಸಾದ್, ದಶರಥ ಕೋಟೆ, ಅನ್ಸರುಲ್ಲಾ ಬೇಗ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ತು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.