ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಸ್ವಯಂ ಶಿಕ್ಷಕ ಯೋಜನೆ ಸಮಾರೋಪ ಇಂದು

Last Updated 28 ಜನವರಿ 2023, 19:31 IST
ಅಕ್ಷರ ಗಾತ್ರ

ಬೀದರ್: ಬಾಲ್ಯದಲ್ಲೇ ಮಕ್ಕಳಲ್ಲಿ ಮಾತೃಭಾಷೆ ಕನ್ನಡದ ಅರಿವು ಮೂಡಿಸುವ ಹಾಗೂ ಕನ್ನಡ ಬೆಳೆಸುವ ದಿಸೆಯಲ್ಲಿ ಗಡಿ ಜಿಲ್ಲೆಯ ಬೀದರ್, ಭಾಲ್ಕಿ, ಔರಾದ್ ಹಾಗೂ ಬಸವಕಲ್ಯಾಣ ತಾಲ್ಲೂಕುಗಳ ಆಯ್ದ ಗ್ರಾಮಗಳಲ್ಲಿ ಕಳೆದ ವರ್ಷದ ಫೆಬ್ರುವರಿಯಲ್ಲಿ ಪ್ರಾರಂಭಿಸಲಾದ ಕನ್ನಡ ಸ್ವಯಂ ಶಿಕ್ಷಕ ಯೋಜನೆ ಜ. 29ಕ್ಕೆ ಸಮಾರೋಪಗೊಳ್ಳಲಿದೆ ಎಂದು ಮಾತೃಭೂಮಿ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ಗುರುನಾಥ ರಾಜಗೀರಾ ತಿಳಿಸಿದ್ದಾರೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನೆರವು, ಕರ್ನಾಟಕ ಸಾಹಿತ್ಯ ಅಕಾಡೆಮಿ ನೇತೃತ್ವ ಹಾಗೂ ಮಾತೃಭೂಮಿ ಸೇವಾ ಪ್ರತಿಷ್ಠಾನದ ಮೇಲ್ವಿಚಾರಣೆಯಲ್ಲಿ ಒಂಬತ್ತು ತಿಂಗಳು ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಭಾನುವಾರ ಬೆಳಿಗ್ಗೆ 11ಕ್ಕೆ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ.ಬಿ.ವಿ. ವಸಂತಕುಮಾರ ಸಮಾರೋಪ ನುಡಿ ಆಡುವರು. ಸಾಮಾಜಿಕ ಕಾರ್ಯಕರ್ತ ವಾದಿರಾಜ, ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೌತಮ ಅರಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳು ಹಾಗೂ ಶಿಕ್ಷಕರಿಗೆ ಪ್ರಶಸ್ತಿ ನೀಡಲಾಗುವುದು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT