ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಂಜಾ: ವೈಜ್ಞಾನಿಕ ಪರಿಹಾರ ಕಲ್ಪಿಸಿ

ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಸಂತ್ರಸ್ತರ ಹಕ್ಕೊತ್ತಾಯ
Last Updated 1 ಮೇ 2022, 15:08 IST
ಅಕ್ಷರ ಗಾತ್ರ

ಬೀದರ್: ಐದು ದಶಕಗಳಿಂದ ಅನ್ಯಾಯಕ್ಕೆ ಒಳಗಾಗಿರುವ ಕಾರಂಜಾ ಯೋಜನೆ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಕಲ್ಪಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಕಾರಂಜಾ ಸಂತ್ರಸ್ತರು ಒಕ್ಕೊರಲಿನಿಂದ ಒತ್ತಾಯಿಸಿದರು.

ಇಲ್ಲಿನ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಿದರು.

ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ಸುಮಾರು 1,200 ಎಕರೆ ಹೆಚ್ಚುವರಿ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಲಾಗಿಲ್ಲ. ಈ ಜಮೀನಿನಲ್ಲಿ ಮಳೆ ನೀರು ನಿಲ್ಲಲು ಆರಂಭವಾಗಿದೆ. ಬೆಳೆ ಬೆಳೆಯಲು ಆಗುತ್ತಿಲ್ಲ. ಕಾರಂಜಾ ಯೋಜನೆಯಲ್ಲಿ ಸ್ವಾಧೀನಪಡಿಸಿಕೊಳ್ಳದ ಹೆಚ್ಚುವರಿ ಜಮೀನು ಜಲಾವೃತ್ತವಾಗಿರುವ ಕಾರಣ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇರುವ ಅತ್ಯಲ್ಪ ಜಮೀನಿನಲ್ಲೂ ನೀರು ಸಂಗ್ರಹವಾಗಿರುವುದರಿಂದ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಕೇವಲ ಭರವಸೆ ನೀಡುತ್ತಿವೆ ಹೊರತು ಪರಿಹಾರ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾಲ್ಕಿ ಶಾಸಕ ಈಶ್ವರ ಖಂಡ್ರೆ, ಬೀದರ್‌ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್, ಬೀದರ್‌ ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ಅಶೋಕ ಖೇಣಿ, ಮಾತನಾಡಿದರು.

ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಗೌರವಾಧ್ಯಕ್ಷ ರಾಜಪ್ಪ ಶಂಕ್ರಪ್ಪ ಕಮಲಾಪುರೆ, ಮಲ್ಲಿಕಾರ್ಜುನ ಮುತ್ತಣ್ಣ, ನಿರ್ದೇಶಕ ವೀರಭದ್ರಪ್ಪ ಉಪ್ಪಿನ್, ವಿರೂಪಾಕ್ಷ ಗಾದಗಿ, ಸಂಜಯ ಡಾಕುಳಗಿ, ರಾಜಕುಮಾರ ಚಿಲ್ಲರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT