ಬೀದರ್: ಸತತ ಮಳೆಗೆ ಕಾರಂಜಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಹರಿಸಬಹುದು. ನದಿಯಲ್ಲಿ ಪ್ರವಾಹದ ಭೀತಿಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಜಲಾಶಯದ ಮೇಲ್ಭಾಗದ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ಒಳಹರಿವು ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಿ ಜಲಾಶಯ ಭರ್ತಿಯಾಗಬಹುದು. ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ತೆಗೆದು ನದಿಗೆ ನೀರು ಹರಿಸಲಾಗುವುದು. ಇದರಿಂದ ನದಿಯಲ್ಲಿ ಪ್ರವಾಹ ಉಂಟಾಗಬಹುದು. ಸಾರ್ವಜನಿಕರು, ಅಕ್ಕಪಕ್ಕದ ಗ್ರಾಮಸ್ಥರು ನದಿಯಲ್ಲಿ ಇಳಿಯುವುದಾಗಲಿ, ಬಟ್ಟೆ ಒಗೆಯುವುದಾಗಲಿ, ಈಜುವುದಾಗಲಿ, ದನ ಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.