ಕಾರಟಗಿ: ಕೃತ್ಯದಲ್ಲಿ ಭಾಗಿಯಾದ ಪಂಚಕಮಿಟಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು. ಹಡಪದ ಅಪ್ಪಣ್ಣರ ಅರಿವಿನ ಗವಿಯಲ್ಲಿ ಅವರ ಮೂರ್ತಿಯನ್ನು ಪುನಃ ಪ್ರತಿಷ್ಠಾಪನೆ ಮಾಡಿ, ಸ್ಥಳವನ್ನು ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಹಡಪದ ಸಮಾಜದ ಪ್ರಮುಖರು, ಮಂಗಳವಾರ ಕಂದಾಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರದ ಹಡಪದ ಅಪ್ಪಣ್ಣನವರ ಅರಿವಿನ ಗವಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ. ಸಾಂಸ್ಕೃತಿಕ ನಾಯಕರೂ ಆದ ಬಸವಣ್ಣನವರ ಆಪ್ತ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯೂ ಅಲ್ಲಿ ಅಸ್ತಿತ್ವದಲ್ಲಿದೆ. ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯು ಅಕ್ರಮವಾಗಿ ಹಸ್ತಕ್ಷೇಪ ಮಾಡಿ, ಅನ್ಯ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಹಡಪದ ಅಪ್ಪಣ್ಣರ ಮೂರ್ತಿ ಪ್ರತಿಷ್ಠಾಪನೆ ಮಾಡದಿರುವುದು ನಮ್ಮ ಸಮುದಾಯದ ಭಕ್ತಿ, ಭಾವನೆಗಳಿಗೆ ಧಕ್ಕೆ ತಂದಿದೆಯಲ್ಲದೇ, ಇತಿಹಾಸದ ಮೌಲ್ಯ ಕುಗ್ಗುವಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ .

ಈಗಾಗಲೇ ಸಮಾಜದ ಮುಖಂಡರು, ಭಕ್ತರು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಪ್ರತಿಭಟನೆಗಳನ್ನೂ ಮಾಡಿದ್ದರೂ ಇನ್ನೂ ನ್ಯಾಯ ದೊರಕಿಲ್ಲ. ಈಗಲಾದರೂ ನ್ಯಾಯ ದೊರಕಿಸಬೇಕು. ಇಲ್ಲದಿದ್ದರೆ ಸಮಾಜದಿಂದ ರಾಜ್ಯದಾದ್ಯಂತ ಹೋರಾಟಕ್ಕಿಳಿಯಲಾಗುವುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಮಾಜದ ಹಿರಿಯರಾದ ಎಚ್.ಮಹಾದೇವಪ್ಪ, ರಾಮಾಂಜನೇಯ, ಸಮಾಜದ ತಾಲ್ಲೂಕು ಅಧ್ಯಕ್ಷ ವೀರೇಶ ದೇವರಮನಿ, ಮಹಾಂತೇಶ, ಅಮರೇಶ ಕೆ., ಶರಣಪ್ಪ ವೈ., ವೀರಭದ್ರಪ್ಪ ಜಾಲಿಹಾಳ, ಶ್ರೀಕಾಂತ, ಮಂಜು ಬಿ. ಸಹಿತ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-35-1449573680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.