ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಬೀದರ್ ಜಿಲ್ಲೆಗೆ ಕೆಲ ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ, ರೈತರು, ನೀರಾವರಿಯತ್ತ ಹೆಚ್ಚಿನ ಚಿತ್ತ ಹರಿಸಿಲ್ಲ.

ಬಸವಾದಿ ಶರಣರು ನೆಲದಾಡಿದ ನೆಲ ಬಸವಕಲ್ಯಾಣದಲ್ಲಿ ₹750 ಕೋಟಿ ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲಾಗುತ್ತಿದ್ದು, ಅದನ್ನು ಈ ವರ್ಷದೊಳಗೆ ಪೂರ್ಣಗೊಳಿಸಿ, ಉದ್ಘಾಟಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಅನುಭವ ಮಂಟಪದೊಂದಿಗೆ ವಚನ ವಿಶ್ವವಿದ್ಯಾಲಯ ಸ್ಥಾಪಿಸಿದರೆ ಕಲ್ಯಾಣಕ್ಕೆ ಪರಿಪೂರ್ಣತೆ ಬರುತ್ತದೆ. ವಚನ ಸಾಹಿತ್ಯದ ಅಧ್ಯಯನ ಮತ್ತು ಸಂಶೋಧನೆಗೆ ಹೆಚ್ಚಿನ ಇಂಬು ಕೊಟ್ಟಂತಾಗುತ್ತದೆ ಎಂದು ನಾಡಿನ ವಿವಿಧ ಮಠಾಧೀಶರು ಬೇಡಿಕೆ ಮಂಡಿಸಿದ್ದರು. ಅದಕ್ಕೆ ಬಜೆಟ್ನಲ್ಲಿ ಸ್ಪಂದನೆ ದೊರೆತಿದೆ.

ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು ನೀಡಲು ನಿರ್ಧರಿಸಲಾಗಿದೆ. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ನೇತೃತ್ವದ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಚನ ವಿವಿ ಸ್ಥಾಪನೆಯ ಬೇಡಿಕೆ ಮಂಡಿಸಿತ್ತು.

ಕಳೆದ ವರ್ಷ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬೀದರ್ ಮಹಾನಗರ ಪಾಲಿಕೆಗೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆಗೆ ಮನ್ನಣೆ ದೊರೆತಿದೆ. ಬಜೆಟ್ನಲ್ಲಿ ₹200 ಕೋಟಿ ಕಾಯ್ದಿರಿಸಲಾಗಿದೆ. ಇದರಿಂದ ಬೀದರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಹಕಾರಿಯಾಗಲಿದೆ. ₹100 ಕೋಟಿ ನೀಡಬೇಕೆಂದು ಜಿಲ್ಲೆಯವರೇ ಆದ ಪೌರಾಡಳಿತ ಸಚಿವ ರಹೀಂ ಖಾನ್ ಪ್ರಸ್ತಾವ ಸಲ್ಲಿಸಿದ್ದರು.

ಬೀದರ್ ಜಿಲ್ಲೆಯಲ್ಲಿ ₹4 ಕೋಟಿ ವೆಚ್ಚದಲ್ಲಿ ಹೊಸ ತಾರಾಲಯ ಸ್ಥಾಪನೆ. ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಂತಾನಹರಣ ನಿಯಂತ್ರಣವನ್ನು ವೈಜ್ಞಾನಿಕ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ತರಲು ಪಶು ವೈದ್ಯರು ಮತ್ತು ಪಶು ವೈದ್ಯಕೀಯ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತಾಂತ್ರಿಕ ತರಬೇತಿ ನೀಡಲು ಬೀದರ್ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದ್ದು, ಜಿಲ್ಲೆಯ ಮಟ್ಟಿಗೆ ಪ್ರಮುಖ ಯೋಜನೆಗಳಾಗಿವೆ.

ಬೀದರ್ನಲ್ಲಿ ಸಾವಿರ ಕೈದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹ ನಿರ್ಮಾಣ ಪೂರ್ಣಗೊಂಡಿರುವುದನ್ನು ಸಿಎಂ ಪ್ರಸ್ತಾಪಿಸಿದ್ದಾರೆ. ಇದರಲ್ಲಿ ಹೊಸತೇನೂ ಇಲ್ಲ. ಈಗಾಗಲೇ ಕಾರಾಗೃಹ ನಿರ್ಮಾಣ ಕಾರ್ಯ ಮುಗಿದಿದ್ದು, ಉದ್ಘಾಟನೆಗೆ ಸಜ್ಜುಗೊಂಡಿದೆ.

ಇನ್ನುಳಿದಂತೆ ಭಾಲ್ಕಿ, ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಕೆರೆ ಹಾಗೂ ಕಾಲುವೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಇಷ್ಟೇ ಅಲ್ಲ, ಆಲಮಟ್ಟಿ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದವರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿದ್ದಾರೆ. ಆದರೆ, ಬೀದರ್ ಜಿಲ್ಲೆಯ ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆನ್ನುವುದು ಜಿಲ್ಲೆಯ ರೈತರ ಪ್ರಮುಖ ಬೇಡಿಕೆಯಾಗಿದೆ. ಆದರೆ, ಬಜೆಟ್ನಲ್ಲಿ ಅದರ ಬಗ್ಗೆ ಎಲ್ಲೂ ಚಕಾರ ಎತ್ತಿಲ್ಲ. ಹಲವು ದಶಕಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಹೋದ ವರ್ಷ ಸತತ ಒಂದು ವರ್ಷ ಧರಣಿ ನಡೆಸಿದ್ದರು. ಹಲವು ಸಲ ಹೋರಾಟಗಳನ್ನು ಮಾಡಿದ್ದರು. ಈ ಕುರಿತು ಸಭೆಗಳನ್ನು ನಡೆಸಲಾಗಿತ್ತಾದರೂ ಬಜೆಟ್ನಲ್ಲಿ ಯಾವುದೇ ಪರಿಹಾರ ದೊರೆತಿಲ್ಲ.

ಇನ್ನು, ಬಚಾವತ್ ಆಯೋಗದ ತೀರ್ಪಿನ ಪ್ರಕಾರ, ಗೋದಾವರಿ ನದಿ ನೀರಿನ ಹಂಚಿಕೆಯಲ್ಲಿ ಜಿಲ್ಲೆಗೆ 6 ಟಿಎಂಸಿ ಅಡಿ ನೀರು ಸಿಕ್ಕಿದೆ. ಆದರೆ, ಅದರ ಸದ್ಭಳಕೆಗೆ ಸೂಕ್ತ ಯೋಜನೆ ರೂಪಿಸಿ, ಅನುದಾನ ಮೀಸಲಿಡಬೇಕೆನ್ನುವುದು ದಶಕಗಳ ಬೇಡಿಕೆಯಾಗಿದೆ. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಪುನರಾರಂಭಿಸಬೇಕೆನ್ನುವುದು ರೈತರ ಇನ್ನೊಂದು ಪ್ರಮುಖ ಬೇಡಿಕೆಯಾಗಿದೆ. ಅದರ ಬಗ್ಗೆಯೂ ಬಜೆಟ್ನಲ್ಲಿ ಪ್ರಸ್ತಾಪಿಸಿಲ್ಲ. ರೈತರು, ನೀರಾವರಿ ಯೋಜನೆಗಳು ಹಾಗೂ ಸಹಕಾರಿ ಕ್ಷೇತ್ರದತ್ತ ಲಕ್ಷ್ಯ ವಹಿಸಿಲ್ಲ ಎನ್ನುವುದು ರೈತರ ಆರೋಪ.

ಹೊಸ ತಾಲ್ಲೂಕುಗಳು, ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿರುವ ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಸೌಕರ್ಯ ಕಲ್ಪಿಸಬೇಕೆನ್ನುವ ಬೇಡಿಕೆಗಳಿಗೂ ಸ್ಪಂದನೆ ದೊರೆತಿಲ್ಲ.

ಬಜೆಟ್ನಲ್ಲಿ ಬೀದರ್ ಜಿಲ್ಲೆಗೆ ಸಿಕ್ಕಿರುವುದೇನು?

1. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಸ್ಥಾಪನೆಗೆ 25 ಎಕರೆ ಜಮೀನು

2. ಬೀದರ್ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ ಸ್ಥಾಪನೆ

3. ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸುತ್ತಿರುವ ಅನುಭವ ಮಂಟಪದ ಕಾಮಗಾರಿಯನ್ನು ಈ ವರ್ಷ ಪೂರ್ಣಗೊಳಿಸಿ ಉದ್ಘಾಟನೆ

4. ಹೊಸದಾಗಿ ಅಸ್ತಿತ್ವಕ್ಕೆ ಬಂದ ಬೀದರ್ ಮಹಾನಗರ ಪಾಲಿಕೆಗೆ ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆಯ 2.0ರ ಅಡಿ 2026–27ನೇ ಸಾಲಿನಲ್ಲಿ ₹200 ಕೋಟಿ ಅನುದಾನ

5. ಬೀದರ್ ಜಿಲ್ಲೆಯಲ್ಲಿ ₹4 ಕೋಟಿ ವೆಚ್ಚದಲ್ಲಿ ಹೊಸ ತಾರಾಲಯ ಸ್ಥಾಪನೆ

6. ಭಾಲ್ಕಿ ತಾಲ್ಲೂಕಿನ ಅಂಬೆಸಾಂಗವಿ ಕೆರೆ ಮತ್ತು ಕಾಲುವೆ ಸುಧಾರಣೆ

7. ಭಾಲ್ಕಿ ತಾಲ್ಲೂಕಿನ ಖಟಕಚಿಂಚೋಳಿಯಲ್ಲಿ ಬಿ.ಸಿ.ಬಿ. ಸುಧಾರಣೆ

8. ಚಿಟಗುಪ್ಪ ತಾಲ್ಲೂಕಿನ ಕೃಷ್ಣಾಪುರವಾಡಿಯಲ್ಲಿ ಹಳ್ಳಕ್ಕೆ ಬಾಂದಾರ ನಿರ್ಮಾಣ

9. ಚಿಟಗುಪ್ಪ ತಾಲ್ಲೂಕಿನ ಉಡಬಾಳದಲ್ಲಿ ಬಿಸಿಬಿ ಮೇಲ್ದಂಡೆಯಲ್ಲಿ ಸಿ.ಡಿ ನಿರ್ಮಾಣ

10. ಹುಮನಾಬಾದ್ ತಾಲ್ಲೂಕಿನಲ್ಲಿ ಚೆಕ್ ಡ್ಯಾಂ ನಿರ್ಮಾಣ

11. ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ ಕೆರೆ ಅಭಿವೃದ್ಧಿ

12. ಬೀದರ್ನಲ್ಲಿ ಸಾವಿರ ಕೈದಿಗಳ ಸಾಮರ್ಥ್ಯದ ಜಿಲ್ಲಾ ಕೇಂದ್ರ ಕಾರಾಗೃಹ ನಿರ್ಮಾಣ ಪೂರ್ಣ

ನಿರೀಕ್ಷೆಗಳೇನಿತ್ತು...?

1. ಕಾರಂಜಾ ಯೋಜನೆಯಲ್ಲಿ ಜಮೀನು ಕಳೆದುಕೊಂಡು ಸಂತ್ರಸ್ತರಾದ ರೈತರಿಗೆ ಪರಿಹಾರ ವಿತರಣೆಗೆ ವಿಶೇಷ ಪ್ಯಾಕೇಜ್ ಘೋಷಿಸುವುದು

2. ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಗೋದಾವರಿ ನದಿ ನೀರಿನ ಹಂಚಿಕೆ ಪ್ರಕಾರ ಜಿಲ್ಲೆ ಪಾಲಿನ ಆರು ಟಿಎಂಸಿ ಅಡಿ ನೀರಿನ ಸದ್ಭಳಕೆಗೆ ಯೋಜನೆ ರೂಪಿಸುವುದು

3. ಹೊಸ ತಾಲ್ಲೂಕುಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು

4. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಿಸುವುದು

5. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯಕ್ಕೆ ಅನುದಾನ

6. ಗಡಿಭಾಗದ ಗ್ರಾಮಗಳ ಅಭಿವೃದ್ಧಿಗೆ ಕ್ರಮ

7. ಉದ್ಯೋಗ ಸೃಷ್ಟಿಸುವಂಥ ಕೈಗಾರಿಕೆಗಳ ಸ್ಥಾಪನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.