ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Election 2023 | ಕ್ಷೇತ್ರದ ಅಭಿವೃದ್ಧಿಗೆ ಆಶೀರ್ವದಿಸಿ: ಖೇಣಿ

Last Updated 5 ಏಪ್ರಿಲ್ 2023, 14:28 IST
ಅಕ್ಷರ ಗಾತ್ರ

ಜನವಾಡ: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಮತದಾರರು ತಮ್ಮನ್ನು ಆಶೀರ್ವದಿಸಬೇಕು ಎಂದು ಕ್ಷೇತ್ರದ ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಅಶೋಕ ಖೇಣಿ ಮನವಿ ಮಾಡಿದರು.

ಬೀದರ್ ತಾಲ್ಲೂಕಿನ ಅಷ್ಟೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕನಾಗಿದ್ದಾಗ ಕ್ಷೇತ್ರದಲ್ಲಿ ₹ 2,231 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಇನ್ನೂ ಅನೇಕ ಕೆಲಸಗಳು ಆಗಬೇಕಾಗಿದೆ. ಅದಕ್ಕಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಮಾತನಾಡಿ, ಕಾಂಗ್ರೆಸ್ ಮನೆ ಯಜಮಾನಿಗೆ ಮಾಸಿಕ ₹ 2 ಸಾವಿರ, 200 ಯುನಿಟ್ ಉಚಿತ ವಿದ್ಯುತ್, ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ಮಾಸಿಕ ₹ 3 ಸಾವಿರ ನಿರುದ್ಯೋಗ ಭತ್ಯೆ ಗ್ಯಾರಂಟಿ ನೀಡಿದೆ. ಮತದಾರರು ಖೇಣಿ ಅವರನ್ನು ಆಯ್ಕೆಗೊಳಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನೆರವಾಗಬೇಕು ಎಂದು ಹೇಳಿದರು.

ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಚನಶೆಟ್ಟಿ, ಕರೀಂಸಾಬ ಕಮಠಾಣ, ಮುಖಂಡರಾದ ರಮೇಶ ಹೌದಖಾನಿ, ವೀರಪ್ಪ ಅಡ್ಡೆ, ಪ್ರಭು ಪರಸಗಿ, ಸ್ಟಿಫನ್, ವಿನೋದ ಪರಸರಗಿ, ಮಾರ್ಟಿನ್ ಮಾಳಗೆ, ಕುಶಾಲರಾವ್, ಶರಣು ಸ್ವಾಮಿದಾಸ, ಪ್ರಶಾಂತ, ಲಖನ್ ಇಮ್ರಾನ್, ಗಯಾಜ್, ಸುನೀಲ್, ಶ್ಯಾಮಿಲ್, ಲೋಕೇಶ ಕನಶೆಟ್ಟಿ, ವಿಶ್ವನಾಥ, ದೀಪಕ್, ಜಾನ್ಸನ್ ಮೊದಲಾದವರು ಇದ್ದರು.
ನಂತರ ಅಶೋಕ ಖೇಣಿ ಅವರು ಮನೆ ಮನೆಗೆ ತಮ್ಮ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳ ಕರಪತ್ರ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT