ಬೀದರ್: ‘ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿ ಆಗಿದ್ದು, ₹100 ಕೋಟಿ ವಿಶೇಷ ಪರಿಹಾರ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಸಂಜೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಅವರು, ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಸೋಯಾ, ತೊಗರಿ ಸೇರಿದಂತೆ ಹಲವು ಬೆಳೆ ನಾಶವಾಗಿವೆ. ನೂರಾರು ಮನೆಗಳು ಹಾನಿಗೊಳಗಾಗಿವೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ದವಸ ಧಾನ್ಯ ನೀರು ಪಾಲಾಗಿದೆ. ಕೆಲವು ಸಂಪರ್ಕ ಸೇತುವೆಗಳು ಕೊಚ್ಚಿಹೋಗಿವೆ. ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಕಡಿತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲಾಡಳಿತದ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್. ನಿಯಮಾವಳಿಯಂತೆ ಸಮೀಕ್ಷೆ ನಡೆಸಿದ್ದು, ಪ್ರಾಥಮಿಕ ಅಂದಾಜಿನಂತೆ ಸುಮಾರು ₹500 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಭಾರಿ ಮಳೆಯಿಂದ ಜಿಲ್ಲೆಯ ರೈತರು, ಬಡಜನರು, ಕೂಲಿಕಾರ್ಮಿಕರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ. ಈ ಹಿನ್ನೆಲೆಯಲ್ಲಿ ತತ್ ಕ್ಷಣವೇ ನೊಂದ ಜನರ ನೆರವಿಗೆ ಬರಬೇಕು ಎಂದು ಖಂಡ್ರೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.