ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

Published 12 ಮೇ 2024, 13:54 IST
Last Updated 12 ಮೇ 2024, 13:54 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಸಿಲು ಹೆಚ್ಚಿತ್ತು. ಮಧ್ಯಾಹ್ನದ ನಂತರ ಏಕಾಏಕಿ ಕಾರ್ಮೋಡ ಕವಿದು, ಭಾರಿ ಗುಡುಗಿನ ಸದ್ದಿನೊಂದಿಗೆ ಮಳೆಯಾಯಿತು. ಸಂಜೆಯ ವರೆಗೆ ಬಿಟ್ಟು ಬಿಟ್ಟು ಮಳೆ ಸುರಿಯಿತು. ಬಿಸಿಲಿನ ಝಳ ದೂರವಾಗಿ ತಂಗಾಳಿ ಬೀಸಲಾರಂಭಿಸಿತು. ಜಿಲ್ಲೆಯ ಭಾಲ್ಕಿ, ಹುಲಸೂರ, ಬಸವಕಲ್ಯಾಣ, ಔರಾದ್‌, ಬೀದರ್‌, ಚಿಟಗುಪ್ಪ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ಸಿಡಿಲಿಗೆ ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮದಲ್ಲಿ ಇನಾಯತ್‌ ಸೈಯದ್‌ (21) ಎಂಬುವರು ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT