ಬುಧವಾರ, ಮಾರ್ಚ್ 29, 2023
32 °C

ಕರ್ನಾಟಕ ರಾಜ್ಯೋತ್ಸವ: ಬೀದರ್‌ನಲ್ಲಿ ಸಚಿವ ಪ್ರಭು ಚವಾಣ್‌ ಧ್ವಜಾರೋಹಣ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಇಲ್ಲಿಯ ಪೊಲೀಸ್‌ ಕವಾಯತು ಮೈದಾನದಲ್ಲಿ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ  ಜಿಲ್ಲಾ ಉಸ್ತುವಾರಿ  ಸಚಿವ ಪ್ರಭು ಚವಾಣ್‌  ಧ್ವಜಾರೋಹಣ ನೆರವೇರಿಸಿದರು.

ಎಲ್ಲರಿಗೂ ರಾಜ್ಯೋತ್ಸವದ  ಶುಭಾಶಯ ಕೋರಿ ಮಾತನಾಡಿದರು. ಸಾಹಿತಿ ಬಸವರಾಜ ಬಲ್ಲೂರ, ಪತ್ರಕರ್ತ ಮಾಣಿಕ ಭೂರೆ, ಸುನೀತಾ ದಾಡಗಿ, ಶಿವಶಂಕರ ಟೋಕರೆ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 18 ಸಾಧಕರನ್ನು ಸನ್ಮಾಸಿದರು.

ಶಾಸಕರಾದ ರಹೀಂಖಾನ್‌, ಬಂಡೆಪ್ಪ ಕಾಶೆಂಪೂರ್,  ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್, ಅರವಿಂದಕುಮಾರ ಅರಳಿ,  ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ,  ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ,  ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್,  ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಬಾಬು ರೆಡ್ಡಿ, ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೇಡೆ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು