ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಮೊದಲ ದಿನ ಖುಷಿಯಿಂದ ಶಾಲೆಗೆ ಬಂದ ಚಿಣ್ಣರು

Last Updated 25 ಅಕ್ಟೋಬರ್ 2021, 5:12 IST
ಅಕ್ಷರ ಗಾತ್ರ

ಬೀದರ್: ಕೋವಿಡ್‌ ಕಾರಣ ಮುಚ್ಚಿದ್ದ ಪ್ರಾಥಮಿಕ ಶಾಲೆಗಳ ಬಾಗಿಲುಗಳು ಸೋಮವಾರ ತೆರೆದುಕೊಂಡವು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಶಿಕ್ಷಕರು ಪ್ರೀತಿಯ ಸ್ವಾಗತ ನೀಡಿ ಮಕ್ಕಳನ್ನು ಬರ ಮಾಡಿಕೊಂಡರು.

ಖಾಸಗಿ ಶಾಲೆಗಳಲ್ಲಿ ಹೆಚ್ಚು ಸಂಭ್ರಮ ಕಂಡ ಬಂದಿತು. ಅನೇಕ ಶಾಲೆಗಳ ಆವರಣದಲ್ಲಿ ರಂಗೋಲಿ ಹಾಕಲಾಗಿತ್ತು. ಪಾಲಕರು ತಮ್ಮ ಮಕ್ಕಳನ್ನು ದ್ವಿಚಕ್ರ ವಾಹನ, ಆಟೊರಿಕ್ಷಾ ಹಾಗೂ ಕಾರುಗಳಲ್ಲಿ ಬಿಟ್ಟು ಹೋದರು. ಖಾಸಗಿ ಶಾಲೆಗಳು ಮಕ್ಕಳಿಗೆ ಚಾಕೂಲೇಟ್‌ ನೀಡಿ ಮಕ್ಕಳನ್ನು ಖುಷಿಪಡಿಸಿದರು.

ಸರ್ಕಾರಿ ಶಾಲೆಗಳ ಮಕ್ಕಳು ಸಹ ಗುಂಪುಗೂಡಿ ಶಾಲೆಗೆ ಬಂದು ಸಂಭ್ರಮಿಸಿದರು. ಸರಸ್ವತಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಮಾಡಿದರು. ಕೆಲ ಶಿಕ್ಷಕರು ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ಸಿಹಿ ವಿತರಿಸಿದರು.

ಬೀದರ್ ಜಿಲ್ಲೆಯಲ್ಲಿ 507 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು, 667 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, 21 ಖಾಸಗಿ ಕಿರಿಯ ಪ್ರಾಥಮಿಕ ಶಾಲೆಗಳು, 17 ಖಾಸಗಿ ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 38 ಅನುದಾನ ರಹಿತ ಶಾಲೆಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT